ರಾಮದುರ್ಗ: ತಾಲ್ಲೂಕಿನ ಮುದೇನೂರಿನ ಕಬ್ಬಿನ ಗದ್ದೆಯಲ್ಲಿ ಗಾಂಜಾ ಗಿಡಗಳನ್ನು ಬೆಳೆದಿರುವ ಮಾಹಿತಿ ಆಧರಿಸಿ ಇಲ್ಲಿನ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ ಸುಮಾರು 7 ಕೆ.ಜಿ. ಗಾಂಜಾ ಗಿಡಗಳನ್ನು ವಶಕ್ಕೆ ಪಡೆದು ಒಬ್ಬನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿ ಗ್ರಾಮದ ಮುದೇನೂರು ಗ್ರಾಮದ ಲಕ್ಕಪ್ಪ ಬಾಲಪ್ಪ ಮೇತ್ರಿ (ಮಾದರ)ಯನ್ನು ಪೊಲೀಸರು ನ್ಯಾಯಾಂಗದ ಮುಂದೆ ಹಾಜರು ಪಡಿಸಿದ್ದಾರೆ. ವಶಕ್ಕೆ ಪಡೆದ ಗಾಂಜಾ ಬೆಲೆ ₹35 ಸಾವಿರ ಎಂದು ಅಂದಾಜಿಸಲಾಗಿದೆ. ರಾಮದುರ್ಗದ ಅಬಕಾರಿ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.