ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

786 ಕೆ.ಜಿ. ಗಾಂಜಾ ನಾಶಕ್ಕೆ ಕ್ರಮ

Last Updated 24 ಜೂನ್ 2021, 16:41 IST
ಅಕ್ಷರ ಗಾತ್ರ

ಬೆಳಗಾವಿ: ‘ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ವಿವಿಧೆಡೆ 129 ಪ್ರಕರಣಗಳಲ್ಲಿ ವಶ‍ಪಡಿಸಿಕೊಂಡಿದ್ದ ₹ 61.01 ಲಕ್ಷ ಮೌಲ್ಯದ 786.67 ಕೆ.ಜಿ. ಗಾಂಜಾವನ್ನು ನಾಶಪಡಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

‘ಜೂನ್‌ 26ರಂದು ಬೆಳಿಗ್ಗೆ 10ಕ್ಕೆ ಮುರಗೋಡ ಪೊಲೀಸ್ ಠಾಣೆ ವ್ಯಾಪ್ತಿಯ ಹಾರೂಗೊಪ್ಪದ ಗ್ರೀನ್ ಮ್ಯಾನೇಜ್‌ಮೆಂಟ್ ಪ್ರೈ.ಲಿ. ಕಾರ್ಖಾನೆಯ ಸ್ಥಳದಲ್ಲಿ ನಿಯಮಾನುಸಾರ ನಾಶಪಡಿಸಲಾಗುವುದು. ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಬೆಳೆಯುತ್ತಿದ್ದ, ಸಾಗಣೆ ಮಾಡುತ್ತಿದ್ದ ಹಾಗೂ ಮಾರುತ್ತಿದ್ದವರ ಮೇಲೆ ದಾಳಿ ನಡೆಸಿ ವಶಕ್ಕೆ ಪಡೆದಿದ್ದ ಗಾಂಜಾ ಇದಾಗಿದೆ. ಎನ್‌ಡಿಪಿಎಸ್‌ ಕಾಯ್ದೆಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿತ್ತು. ಜಿಲ್ಲಾ ಮಾದಕ ದ್ರವ್ಯ ವಿಲೇವಾರಿ ಸಮಿತಿಯಿಂದ ಅನುಮತಿ ಪಡೆದು ನಾಶಪಡಿಸಲಾಗುತ್ತಿದೆ’ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT