ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ | 87 ಮಂದಿಗೆ ಕೊರೊನಾ ಸೋಂಕು, ಇಬ್ಬರು ಸಾವು

Last Updated 19 ಜುಲೈ 2020, 17:16 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 87 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ ಸಾವಿರದ (1,019) ಗಡಿ ದಾಟಿದೆ.

ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಇಬ್ಬರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ತಿಳಿಸಿದೆ. ಮೃತರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ರೋಗಿ ಸಂಖ್ಯೆ 42,457 ಆಗಿದ್ದ 57 ವರ್ಷದ ನಗರದ ಮಹಿಳೆ ಜುಲೈ 11ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಶನಿವಾರ ಸಾವಿಗೀಡಾಗಿದ್ದಾರೆ. ರೋಗಿ ಸಂಖ್ಯೆ 48,985 ಆಗಿರುವ 56 ವರ್ಷದ ಅಥಣಿಯ ಮಹಿಳೆ ಜುಲೈ 14ರಂದು ಆಸ್ಪತ್ರೆಗೆ ದಾಖಲಾಗಿದ್ದು. ಶನಿವಾರ ಮೃತರಾಗಿದ್ದಾರೆ. ಇಬ್ಬರಿಗೂ ತೀವ್ರ ಉಸಿರಾಟದ ತೊಂದರೆ ಇತ್ತು ಎಂದು ಇಲಾಖೆ ತಿಳಿಸಿದೆ.

ನಿಪ್ಪಾಣಿ ಸಿಪಿಐಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ವಿಷಯವನ್ನು ಎಸ್ಪಿ ಲಕ್ಷ್ಮಣ ನಿಂಬರಗಿ ಖಚಿತಪಡಿಸಿದ್ದಾರೆ. ‘ಅವರು ಐದು ದಿನಗಳಿಂದ ಕ್ವಾರಂಟೈನ್‌ನಲ್ಲಿದ್ದರು. ಠಾಣೆಯ ಕೆಲಸ ಇರಲಿಲ್ಲ. ಹೀಗಾಗಿ, ಠಾಣೆ ಸೀಲ್‌ಡೌನ್‌ ಅಗತ್ಯವಿಲ್ಲ. ಆದರೆ, ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್‌ ಮಾಡಲು ಕ್ರಮ ಕೈಗೊಳ್ಳಲಾಗುವುದು’ ಎಂದು ಮಾಹಿತಿ ನೀಡಿದರು. ಸಿಪಿಐ, ಕೊಗನೋಳಿ ಚೆಕ್‌ಪೋಸ್ಟ್‌ ಸೇರಿದಂತೆ ವೃತ್ತದ ವಿವಿಧೆಡೆ ಸಂಚರಿಸಿ ಕಾರ್ಯನಿರ್ವಹಿಸಿದ್ದರು.

ಜಿಲ್ಲೆಯ ಸಕ್ರಿಯ ಪ್ರಕರಣಗಳು 558ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT