ಮೂಡಲಗಿ: ಬೆಳಗಾವಿ ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಕೈಗಾರಿಕಾ ವಲಯಕ್ಕೆ ಬಲ ತುಂಬಲು ಉದ್ದೇಶಿಸಲಾಗಿರುವ 69.42 ಕಿ.ಮೀ ಉದ್ದದ ವರ್ತುಲ ರಸ್ತೆ (ರಿಂಗ್ ರೋಡ್) ಯೋಜನೆಗೆ ಅಗತ್ಯವಿರುವ ಒಟ್ಟು 1,248 ಎಕರೆ ಭೂಮಿಯಲ್ಲಿ ಈಗಾಗಲೇ ಶೇ. 90ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಉತ್ತರ ನೀಡಿದ್ದಾರೆ ಎಂದು ಸಂಸದ ಈರಣ್ಣ ಕಡಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಬೆಳಗಾವಿ ನಗರದ ವರ್ತುಲ ರಸ್ತೆ (ರಿಂಗ್ ರೋಡ್) ಯೋಜನೆಯ ಪ್ರಸ್ತುತ ಸ್ಥಿತಿ ಕುರಿತು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ. ಯೋಜನೆಯ ಒಟ್ಟು ₹1,622 ಕೋಟಿಗಳ ಅಂದಾಜು ವೆಚ್ಚದಲ್ಲಿ ಸುಮಾರು 69.42 ಕಿ.ಮೀ ಉದ್ದದ ಈ ವರ್ತುಲ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಮೂರು ಪ್ಯಾಕೇಜ್ಗಳಲ್ಲಿ ವಿಂಗಡಿಸಿದೆ. ಇದರಲ್ಲಿ ಪ್ಯಾಕೇಜ್-1ಕ್ಕೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಆರಂಭವಾಗಿದ್ದು, ಉಳಿದ ಎರಡು ಪ್ಯಾಕೇಜ್ಗಳ ವಿವರವಾದ ಯೋಜನಾ ವರದಿ (ಡಿಪಿಆರ್) ಅಂತಿಮಗೊಂಡಿದ್ದು, ಶೀಘ್ರದಲ್ಲೇ ಕೇಂದ್ರ ಸರ್ಕಾರದಿಂದ ತಾಂತ್ರಿಕ ಅನುಮೋದನೆ ದೊರೆಯಲಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು, ಪುಣೆ ಮತ್ತು ಗೋವಾ ಕಡೆಯಿಂದ ಬರುವ ಭಾರಿ ವಾಹನಗಳು ನಗರದೊಳಗೆ ಪ್ರವೇಶಿಸದೆ ನೇರವಾಗಿ ಹೊರವಲಯದ ಮೂಲಕ ಸಾಗಲು ಈ ರಸ್ತೆ ಅನುವು ಮಾಡಿಕೊಡುತ್ತದೆ. ಹೊನಗಾ, ಮುತಗಾ, ಉಚಗಾಂವ ಸೇರಿದಂತೆ ತಾಲ್ಲೂಕಿನ 32 ಹಳ್ಳಿಗಳ ಮೂಲಕ ಹಾದುಹೋಗುವ ಈ ಹೆದ್ದಾರಿಯು ಗ್ರಾಮೀಣ ಭಾಗದ ಆರ್ಥಿಕತೆಗೆ ಚೈತನ್ಯ ನೀಡಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ ಎಂದು ಕಡಾಡಿ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.