ಸೋಮವಾರ, ಆಗಸ್ಟ್ 8, 2022
24 °C

ಮಾರ್ಕಂಡೇಯ ನದಿಯ ಪ್ರವಾಹದಲ್ಲಿ ಕೊಚ್ಚಿ ಹೋದ ರೈತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ತಾಲ್ಲೂಕಿನ ಮಾರ್ಕಂಡೇಯ ನದಿಯ ಪ್ರವಾಹದಲ್ಲಿ ರೈತರೊಬ್ಬರು ಕೊಚ್ಚಿಕೊಂಡು ಹೋದ ಘಟನೆ ಶುಕ್ರವಾರ ನಡೆದಿದೆ.

ಅವರನ್ನು ಕಾಕತಿ ಗ್ರಾಮದ ಸಿದ್ರಾಯಿ ಸುತಗಟ್ಟಿ (65) ಎಂದು ಗುರುತಿಸಲಾಗಿದೆ.

 ಜಮೀನಿನಲ್ಲಿ ಕೆಲಸ ಮುಗಿಸಿ ವಾಪಸಾಗುವಾಗ ನದಿಯ ಸೇತುವೆ ಬಳಿ ಕೈ ಕಾಲು ತೊಳೆಯಲು‌ ಹೋಗಿದ್ದಾರೆ. ಈ ವೇಳೆ ಕಾಲು ಜಾರಿ ಬಿದ್ದು ನೀರಿನ‌ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಬೆಳಗಾವಿ ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನವರ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕತ್ತಲಾದ್ದರಿಂದ ಶೋಧ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು