ಮಂಗಳವಾರ, ಜುಲೈ 27, 2021
21 °C

ಇಬ್ಬರು ಪುತ್ರಿಯರೊಂದಿಗೆ ತಂದೆ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ವ್ಯಕ್ತಿಯು ಇಬ್ಬರು ಪುತ್ರಿಯರೊಂದಿಗೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಪೊಗತ್ಯಾನಟ್ಟಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಕಾಡಪ್ಪ ರಂಗಾಪುರೆ (48), ಕೀರ್ತಿ (18) ಹಾಗೂ ಸ್ಫೂರ್ತಿ (16) ಮೃತರು.

ಕಾಡಪ್ಪ ಅವರ ಪತ್ನಿ ಚನ್ನವ್ವ ರಂಗಾಪುರೆ ವಾರದ ಹಿಂದೆ ಹೃದಯಾಘಾತದಿಂದ ನಿಧನರಾಗಿದ್ದರು. ಇದರಿಂದ ಮನನೊಂದು ಇಡೀ ಕುಟುಂಬದವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಚಿಕ್ಕೋಡಿ ಡಿವೈಎಸ್ಪಿ ಮನೋಜ ನಾಯಕ, ಸಿಪಿಐ ಆರ್‌.ಆರ್. ಪಾಟೀಲ ಹಾಗೂ ಪಿಎಸ್‌ಐ ರಾಕೇಶ ಬಗಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು