ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ | ಪಾಲಿಕೆ ಕಚೇರಿಯಲ್ಲಿ ಲ್ಯಾಪ್‌ಟಾಪ್‌ ಕಳವು

Published 19 ಫೆಬ್ರುವರಿ 2024, 16:00 IST
Last Updated 19 ಫೆಬ್ರುವರಿ 2024, 16:00 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆಯ ದಕ್ಷಿಣ ವಲಯದ ಕಂದಾಯ ಕಚೇರಿಯಲ್ಲಿದ್ದ ಪ್ರಮುಖ ದಾಖಲೆಗಳ ಸಂಗ್ರಹ ಹೊಂದಿದ್ದ ನಾಲ್ಕು ಲ್ಯಾಪ್‌ಟಾಪ್‌ ಕಳ್ಳತನವಾಗಿವೆ.

ಇಲ್ಲಿನ ಬಸವೇಶ್ವರ ವೃತ್ತದಲ್ಲಿರುವ ಕಚೇರಿಗೆ ಭಾನುವಾರ ರಾತ್ರಿ ನುಗ್ಗಿದ ಕಳ್ಳರು ಪ್ರಮುಖ ಲ್ಯಾಪ್‌ಟಾಪ್‌ ಕದ್ದಿದ್ದಾರೆ. ಕಚೇರಿಯ ಕಿಡಕಿ ಗಾಜುಗಳನ್ನೂ ಒಡೆದು, ಬಾಗಿಲನ್ನೂ ಮುರಿದಿದ್ದಾರೆ. ಸೋಮವಾರ ಬೆಳಿಗ್ಗೆ ಸಿಬ್ಬಂದಿ ಕಚೇರಿಗೆ ಬಂದು ಟ್ರಜರಿ ಬಾಗಿಲು ತೆರೆದಾಗಲೇ ವಿಷಯ ಗೊತ್ತಾಗಿದೆ.

ಆಸ್ತಿ ಮಾಲೀಕತ್ವದ ದಾಖಲಾತಿ, ಆಸ್ತಿ ಮಾಲೀಕರ ಗುರುತಿನ ಚೀಟಿ, ತೆರಿಗೆ ಚೀಟಿ, ಕಟ್ಟಡ ಪರವಾನಗಿ ಪತ್ರ, ಹೀಗೆ 26 ವಾರ್ಡ್‌ಗಳ ನಿವಾಸಿಗಳ ದಾಖಲೆಗಳ ಸಂಗ್ರಹ ಕಳವಾದ ಲ್ಯಾಪ್‌ಟಾಪ್‌ನಲ್ಲಿದೆ ಎಂದು ಪಾಲಿಕೆ ಮೂಲಗಳು ತಿಳಿಸಿವೆ.

ಸ್ಥಳಕ್ಕೆ ಧಾವಿಸಿದ ಟಿಳಕವಾಡಿ ಠಾಣೆ ಪೊಲೀಸರು ಹಾಗೂ ಶ್ವಾನದಳ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪಾಲಿಕೆ ಆಯುಕ್ತ ಪಿ‌.ಎನ್.ಲೋಕೇಶ, ‘ನಾನು ಕೂಡ ಸ್ಥಳಕ್ಕೆ ಭೇಟಿ ನೀಡಿದ್ದೇನೆ. ಏನೆಲ್ಲಾ ಮಹತ್ವದ ದಾಖಲೆಗಳು ಕಳ್ಳತನ ಆಗಿವೆ ಪರಿಶೀಲಿಸುತ್ತೇವೆ. ಪೊಲೀಸರು ತನಿಖೆ ನಡೆಸಲಿದ್ದು, ನಮ್ಮ ಮೂಲಗಳಿಂದಲೂ ವಿಚಾರಣೆ ನಡೆಸುತ್ತೇವೆ’ ಎಂದರು‌.

‘ಭಾನುವಾರ ರಜೆ ಇತ್ತು. ಸೋಮವಾರ ಬೆಳಿಗ್ಗೆ 9.15ಕ್ಕೆ ಕಚೇರಿಗೆ ಬಂದಾಗ ಕಳ್ಳತನ ಆಗಿದ್ದು ಗೊತ್ತಾಗಿದೆ. ಇಲ್ಲಿ ಸಿಸಿಟಿವಿ ಕ್ಯಾಮೆರಾ ಕೂಡ ಇಲ್ಲ’ ಎಂದು ಪಾಲಿಕೆ ಕಂದಾಯ ಅಧಿಕಾರಿ ಡಿ.ಜಿ.ಕೋರಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT