ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಡೆ ಕುಸಿತ: ಗ್ರಾಮಕ್ಕೆ ಚನ್ನರಾಜ ಹಟ್ಟಿಹೊಳಿ ಭೇಟಿ

Published 3 ಜನವರಿ 2024, 16:56 IST
Last Updated 3 ಜನವರಿ 2024, 16:56 IST
ಅಕ್ಷರ ಗಾತ್ರ

ಹಿರೇಬಾಗೇವಾಡಿ: ಸಮೀಪದ ಬಡಾಲ ಅಂಕಲಗಿ ಗ್ರಾಮದಲ್ಲಿ ಮಂಗಳವಾರ ಆಕಸ್ಮಿಕ ಗೋಡೆ ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತಪಟ್ಟ ಚನ್ನಪ್ಪ ಕುರುಬರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಘಟನೆಯ ಬಗ್ಗೆ ಮಾಹಿತಿ ಪಡೆದು ಸರ್ಕಾರದಿಂದ ಕುಟುಂಬದವರಿಗೆ ಪರಿಹಾರ ಕೊಡಿಸುವ ವ್ಯವಸ್ಥೆ ಮಾಡಲಾಗುವುದೆಂದು ಭರವಸೆ ನೀಡಿದರು.

ತಹಶೀಲ್ದಾರ್‌ ಬಸವರಾಜ ನಾಗರಾಳ, ಹಿರೇಬಾಗೇವಾಡಿ ಸಿಪಿಐ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT