ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಜಿಲ್ಲೆಯಲ್ಲಿ ಮಕ್ಕಳಿಗೆ ಪ್ರತ್ಯೇಕ ಕೇಂದ್ರ

ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ: ಸಚಿವೆ ಜೊಲ್ಲೆ ಹೇಳಿಕೆ
Last Updated 3 ಜೂನ್ 2021, 16:27 IST
ಅಕ್ಷರ ಗಾತ್ರ

ಚಿಕ್ಕೋಡಿ: ಪ್ರತಿ ಜಿಲ್ಲೆಯಲ್ಲಿ ಮಕ್ಕಳಿಗಾಗಿ ಕೋವಿಡ್ ಕೇರ್ ಸೆಂಟರ್ ಆರಂಭಿಸುವ ಕುರಿತು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಾಲ್ಲೂಕಿನ ಯಕ್ಸಂಬಾ ಗ್ರಾಮದಲ್ಲಿ ಇಲಾಖೆ ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿದರು.

ಇಲಾಖೆಯ ಉಪ ನಿರ್ದೇಶಕರು, ಡಿಸಿಪಿಒ ಹಾಗೂ ಸಿಡಿಪಿಒ ಜೊತೆ ಅವರು ಪೂರ್ವಭಾವಿ ಸಭೆ ನಡೆಸಿದರು.

‘ಕೊರೊನಾ ಮೂರನೇ ಅಲೆಯಿಂದ ಮಕ್ಕಳಿಗೆ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ತಗಲುವ ಸಾಧ್ಯತೆ ಇರುವುದರಿಂದ ಮಕ್ಕಳಿಗಾಗಿ ಪ್ರತಿ ಜಿಲ್ಲೆಯಲ್ಲಿ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ತೆರೆಯಲು ನಿರ್ಧರಿಸಲಾಗಿದೆ. ಈ ಸಲುವಾಗಿ ಇಲ್ಲಿಯವರೆಗೆ ಮಕ್ಕಳಲ್ಲಿ ಕಂಡುಬಂದ ಕೋವಿಡ್ ಪಾಸಿಟಿವ್ ಪ್ರಕರಣ ಹಾಗೂ ಕೊರೊನಾದಿಂದ ಬಾಧಿತರಾದ ಮಕ್ಕಳ ಮಾಹಿತಿ ಕಲೆ ಹಾಕಲಾಗುತ್ತಿದೆ‘ ಎಂದರು.

’ಕಡಿಮೆ ರೋಗ ಲಕ್ಷಣ ಹಾಗೂ ಸೋಂಕು ಬಾಧಿತ ಮಕ್ಕಳಿಗೆ ಕೋವಿಡ್ ಕೇರ್ ಕೆಂದ್ರದಲ್ಲಿ ಚಿಕಿತ್ಸೆ ನೀಡಲಾಗುವುದು. ತುರ್ತಾಗಿ ಬೆಳಗಾವಿಯಲ್ಲಿ ಮಕ್ಕಳಿಗೆ ಕೋವಿಡ್ ಕೇರ್ ಸೆಂಟರ್ ತೆರೆಯಲು ಚಿಂತನೆ ನಡೆಸಲಾಗಿದೆ. ಚಿಕ್ಕೋಡಿ ಭಾಗದ ಮಕ್ಕಳಿಗೆ ಅನುಕೂಲವಾಗಲು ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆಯಲ್ಲಿ ಕೇಂದ್ರ ಆರಂಭಿಸಲಾಗುವುದು‘ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಬಸವರಾಜ ವರವಟ್ಟಿ, ಡಿಸಿಪಿಒ ರತ್ನಾಕರ, ಜಿಲ್ಲಾ ನಿರೂಪಣಾ ಅಧಿಕಾರಿ ನವೀನಕುಮಾರ, ಜಿಲ್ಲಾ ಅಂಗವಿಕಲ ಕಲ್ಯಾಣ ಅಧಿಕಾರಿ ನಾಮದೇವ ಬಿಲಕರ, ಸಿಡಿಪಿಒ ಸುಮಿತ್ರಾ ಡಿ.ಬಿ, ದೀಪಾ ಕಾಳೆ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT