ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕೋಡಿ | ವಾಂತಿ: ವಿದ್ಯಾರ್ಥಿ ಸಾವು

Published 29 ಫೆಬ್ರುವರಿ 2024, 15:47 IST
Last Updated 29 ಫೆಬ್ರುವರಿ 2024, 15:47 IST
ಅಕ್ಷರ ಗಾತ್ರ

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ಪಟ್ಟಣದ ಸಿಟಿಇ ಸಂಸ್ಥೆಯ ಇಂಟರ್‌ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಅನಂತಮೂರ್ತಿ ವಿಠ್ಠಲ ಬಡಾಯಿ (13) ಗುರುವಾರ ಆಕಸ್ಮಿಕವಾಗಿ ಮೃತಪಟ್ಟಿದ್ದಾನೆ.

ಹುಕ್ಕೇರಿ ತಾಲ್ಲೂಕಿನ ಬಡಕುಂದ್ರಿ ಗ್ರಾಮದ, 7ನೇ ತರಗತಿ ಓದುತ್ತಿದ್ದ ಅನಂತಮೂರ್ತಿ ಬುಧವಾರ ಮಧ್ಯಾಹ್ನದವರೆಗೂ ತರಗತಿಗಳಿಗೆ ಹಾಜರಾಗಿದ್ದ. ಮಧ್ಯಾಹ್ನದ ನಂತರ ಅನಾರೋಗ್ಯದಿಂದಾಗಿ ಮನೆಗೆ ತೆರಳಿದ್ದ ಎಂದು ಶಿಕ್ಷಕರು ಮಾಹಿತಿ ನೀಡಿದ್ದಾರೆ.

ಬಾಲಕ ಮೂರು ಬಾರಿ ವಾಂತಿ ಮಾಡಿಕೊಂಡ ನಂತರ ತೀವ್ರ ಅಸ್ವಸ್ಥನಾಗಿದ್ದ. ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾ‌ಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಗುರುವಾರ ಕೊನೆಯುಸಿರೆಳೆದ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT