ಗುರುವಾರ, 10 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಕ್ಕೋಡಿ: ವಿದ್ಯುತ್ ತಂತಿ ತುಳಿದು ಬಾಲಕ ಸಾವು

Published : 29 ಸೆಪ್ಟೆಂಬರ್ 2024, 15:23 IST
Last Updated : 29 ಸೆಪ್ಟೆಂಬರ್ 2024, 15:23 IST
ಫಾಲೋ ಮಾಡಿ
Comments

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಮಲಿಕವಾಡ ಗ್ರಾಮದಲ್ಲಿ ಕಬ್ಬಿನ ಗದ್ದೆಯಲ್ಲಿ ಜಾನುವಾರುಗಳಿಗೆ ಮೇವು ಕೊಯ್ಲು ಮಾಡಿಕೊಂಡು ಶನಿವಾರ ರಾತ್ರಿ ಮನೆಗೆ ಮರಳುವಾಗ ಅಲ್ಲಿ ಹರಿದು ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬಾಲಕ ಪೃಥ್ವಿರಾಜ್‌ ಗಣಪತಿ ಕೆರೂರೆ (17) ಮೃತಪಟ್ಟಿದ್ದಾರೆ.

‘ಹಲವು ದಿನಗಳಿಂದ ವಿದ್ಯುತ್‌ ತಂತಿ ಹರಿದು ಬಿದ್ದಿವೆ. ಈ ಕುರಿತು ಸದಲಗಾ ಹೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದರೂ ಸರಿಪಡಿಸಿಲ್ಲ. ಪೃಥ್ವಿರಾಜ್‌ ಮೃತಪಡಲು ಹೆಸ್ಕಾಂ ನಿರ್ಲಕ್ಷ್ಯವೇ ಕಾರಣ’ ಎಂದು ಬಾಲಕನ ಕುಟುಂಬದವರು ಆರೋಪಿಸಿದ್ದಾರೆ.

‘ಹೆಸ್ಕಾಂ ನಿರ್ಲಕ್ಷ್ಯದಿಂದ ಮೃತಪಟ್ಟ ಪೃಥ್ವಿರಾಜ್ ಕುಟುಂಬದವರಿಗೆ ಸೂಕ್ತ ಪರಿಹಾರ  ನೀಡಲಾಗುವುದು’ ಎಂದು ಸದಲಗಾ ಹೆಸ್ಕಾಂ ಕಚೇರಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ನಾಗರಾಜ ಯಳಕರ ತಿಳಿಸಿದ್ದಾರೆ.

ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT