ಶನಿವಾರ, ಮೇ 21, 2022
23 °C

ಬೆಳಗಾವಿ: ನದಿಯಲ್ಲಿ ಸಿಲುಕಿದ ಯುವಕನ ರಕ್ಷಣೆಗೆ ಹರಸಾಹಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಸಿದ್ನಾಳ ಗ್ರಾಮದ ಹತ್ತಿರ ವೇದಗಂಗಾ ನದಿಯಲ್ಲಿ ಸಿಲುಕಿರುವ ಯುವಕನ ರಕ್ಷಣೆಗೆ ಎನ್‌ಡಿಆರ್‌ಎಫ್‌ ತಂಡದವರು ಕಾರ್ಯಾಚರಣೆ ಆರಂಭಿಸಿದ್ದಾರೆ.

ಆ ಯುವಕ ಕಾಲು ಜಾರಿ ಬಿದ್ದು ನದಿಯಲ್ಲಿ ಕೊಚ್ಚಿಕೊಂಡು ಹೋಗುವಾಗ, ನದಿಯೊಳಗೆ ಬಿದ್ದಿರುವ ಮರವೇರಿ ಕುಳಿತಿದ್ದಾರೆ. ನದಿಯ ಮಧ್ಯದಲ್ಲಿ ಅವರು ಸಿಲುಕಿದ್ದಾರೆ. ಅವರನ್ನು ಪ್ರಜ್ವಲ್ ಕುಲಕರ್ಣಿ ಎಂದು ಗುರುತಿಸಲಾಗಿದೆ.

ಎನ್‌ಡಿಆರ್‌ಎಫ್‌, ಅಗ್ನಿಶಾಮಕ ದಳ, ಪೊಲೀಸರು ನಡೆಸಿರುವ ಕಾರ್ಯಾಚರಣೆಗೆ ಸ್ಥಳೀಯರೂ ಕೈಜೋಡಿಸಿದ್ದಾರೆ. ನೀರು ರಭಸದಿಂದ ಹರಿಯುತ್ತಿದೆ. ಮಳೆಯೂ ಬೀಳುತ್ತಿರುವುದು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು