ಶುಕ್ರವಾರ, ಡಿಸೆಂಬರ್ 4, 2020
24 °C

ಅಂದಾಜುಗಳ ಸಮಿತಿಗೆ ಅಭಯ ಅಧ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಇಲ್ಲಿನ ದಕ್ಷಿಣ ಮತ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರನ್ನು ವಿಧಾನಸಭೆಯ ಅಂದಾಜುಗಳ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದ್ದಾರೆ.

ಈ ಸಮಿತಿಯಲ್ಲಿ ಬೆಳಗಾವಿಯವರೇ ಆದ ಡಿ.ಎಂ. ಐಹೊಳೆ, ಹಾಲಪ್ಪ ಆಚಾರ್, ಮಹಾಂತೇಶ ದೊಡ್ಡಗೌಡರ, ಮಹಾಂತೇಶ ಕೌಜಲಗಿ, ಸತೀಶ ಜಾರಕಿಹೊಳಿ ಸದಸ್ಯರಾಗಿದ್ದಾರೆ. ಉಳಿದಂತೆ, ಎಸ್.ಎ. ರವೀಂದ್ರನಾಥ್, ವೀರಣ್ಣ ಚರಂತಿಮಠ, ಡಾ.ಶಿವರಾಜ ಪಾಟೀಲ, ಅಮೃತ್ ದೇಸಾಯಿ,  ಸುನೀಲ ನಾಯ್ಕ, ಅಮರೇಗೌಡ ಬಯ್ಯಾಪುರ, ಶರಣ್ಣ ಬಸಪ್ಪ ದರ್ಶನಾಪುರ, ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ, ಡಿ.ಸಿ. ತಮ್ಮಣ್ಣ, ಕೆ.ಎಂ. ಶಿವಲಿಂಗೇಗೌಡ, ಸಿ.ಎನ್. ಬಾಲಕೃಷ್ಣ ಸದಸ್ಯರಾಗಿದ್ದಾರೆ.

ಸರ್ಕಾರದ ಕ್ರಮಕ್ಕೆ ಜನ ಮನ್ನಣೆ:

‘ಕೊರೊನಾ ಹಾಗೂ ಲಾಕ್‌ಡೌನ್‌ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೈಕೊಂಡ ಕ್ರಮಕ್ಕೆ ಜನರಿಂದ ಮನ್ನಣೆ ದೊರೆತಿದೆ. ಬಿಹಾರ ರಾಜ್ಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ನೀಡಿದ ಕೊಡುಗೆಯಿಂದಾಗಿ ಬಿಜೆಪಿ ಮತ್ತು ಜೆಡಿಯುಗೆ ಜನರು ಬೆಂಬಲ ನೀಡಿದ್ದಾರೆ. ಅಂತೆಯೇ ರಾಜ್ಯದ ಆರ್‌.ಆರ್. ನಗರ ಮತ್ತು ಶಿರಾ ಉಪ ಚುನಾವಣೆ ಫಲಿತಾಂಶ ನಮ್ಮ ಸರ್ಕಾರದ ಕ್ರಮಗಳಿಗೆ ಮನ್ನಣೆ ಕೊಟ್ಟಂತಾಗಿದೆ’ ಎಂದು ಅಭಯ ಪಾಟೀಲ ಹೇಳಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು