ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಭಿಜಿತ ಜವಳಕರ್ ಬಂಧನ ಪ್ರಕರಣ: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Published 27 ನವೆಂಬರ್ 2023, 5:19 IST
Last Updated 27 ನವೆಂಬರ್ 2023, 5:19 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಭಾಗ್ಯ ನಗರದ 9ನೇ ಕ್ರಾಸ್ ನಲ್ಲಿ ಮೊಬೈಲ್ ಟವರ್ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿ ಮಹಾನಗರ ಪಾಲಿಕೆ ಸದಸ್ಯ ಅಭಿಜಿತ ಜವಳಕರ್ ಬಂಧಿಸಿರುವುದನ್ನು ವಿರೋಧಿಸಿ, ಮೇಯರ್ ಶೋಭಾ ಸೋಮನಾಚೆ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ನಗರ ಪೊಲೀಸ್ ಆಯುಕ್ತರ ಕಚೇರಿ ಎದುರು ಸೋಮವಾರ ಪ್ರತಿಭಟನೆ ಆರಂಭಿಸಿದ್ದಾರೆ.

ಈ ಪ್ರಕರಣದ ಕುರಿತು ನಗರ ಪೊಲೀಸ್ ಆಯುಕ್ತರೊಂದಿಗೆ ಚರ್ಚಿಸಲು ಬಿಜೆಪಿ ಕಾರ್ಯಕರ್ತರು ಆಗಮಿಸಿದ್ದರು. ಆದರೆ, ಕಚೇರಿಯೊಳಗೆ ತೆರಳಲು ಅವಕಾಶ ನೀಡದ್ದರಿಂದ ಕಚೇರಿ ಮುಂದೆಯೇ ಪ್ರತಿಭಟನೆಗೆ ಕುಳಿತಿದ್ದಾರೆ.

'ಕಚೇರಿಯೊಳಗೆ ಹೋಗಲು ಮೇಯರ್ ಗೆ ಅವಕಾಶ ಕೊಡದೆ ಪೊಲೀಸರು ಅಪಮಾನ ಮಾಡಿದ್ದಾರೆ' ಎಂದು ದೂರಿದ್ದಾರೆ

ಆಯುಕ್ತರ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ರಾಮಪ್ಪ, ಡಿಸಿಪಿ ಪಿ.ವಿ.ಸ್ನೇಹಾ ಅವರು ಸಭೆ ನಡೆಸುತ್ತಿದ್ದಾರೆ.

ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ರಾಮಪ್ಪ, ಡಿಸಿಪಿ ಪಿ.ವಿ.ಸ್ನೇಹಾ

ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ರಾಮಪ್ಪ, ಡಿಸಿಪಿ ಪಿ.ವಿ.ಸ್ನೇಹಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT