ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಡಿಸಿಎಂ ಹುದ್ದೆ ರದ್ದುಪಡಿಸಿ, ಇಲ್ಲವೇ ಸುವರ್ಣ ವಿಧಾನಸೌಧಕ್ಕೆ CM ನೇಮಿಸಿ: ಭೀಮಪ್ಪ

Published 1 ಜುಲೈ 2024, 7:21 IST
Last Updated 1 ಜುಲೈ 2024, 7:21 IST
ಅಕ್ಷರ ಗಾತ್ರ

ಬೆಳಗಾವಿ: 'ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆ ಮಾನ್ಯತೆ ಬಗ್ಗೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಹಾಕಲು ಯೋಜಿಸಿದ್ದೇನೆ. ಇದಕ್ಕಾಗಿ ಮುಖ್ಯಮಂತ್ರಿ ಹಾಗೂ ಸಚಿವರಿಗೆ ಪತ್ರ ಬರೆದಿದ್ದೇ‌ನೆ. ಅವರ ಅಭಿಪ್ರಾಯ ಆಧರಿಸಿ ಮುಂದುವರಿಯುತ್ತೇನೆ' ಎಂದು ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ ಹೇಳಿದರು.

ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಸಂವಿಧಾನದಲ್ಲಿ ಡಿಸಿಎಂ ಹುದ್ದೆ ಬಗ್ಗೆ ಉಲ್ಲೇಖವೇ ಇಲ್ಲ‌. ಆದರೂ, ರಾಜ್ಯ ಸರ್ಕಾರ ಒಬ್ಬರನ್ನು ಡಿಸಿಎಂ ಮಾಡಿದೆ. ಅಲ್ಲದೆ, ಈಗ ಹಲವು ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಮಾತನಾಡುತ್ತಿದ್ದಾರೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಜಿ.ಪರಮೇಶ್ವರ, ಎಚ್.ಕೆ.ಪಾಟೀಲ, ಸತೀಶ ಜಾರಕಿಹೊಳಿ, ಕೆ.ರಾಜಣ್ಣ ಅವರಿಗೆ ಪತ್ರ ಬರೆದಿದ್ದೇನೆ.

ಸರ್ಕಾರ ಸಂವಿಧಾನಬದ್ಧವಾಗಿ ಆಡಳಿತ ನಡೆಸುತ್ತಿದೆಯೋ ಅಥವಾ ಸಾಂಪ್ರದಾಯಿಕವಾಗಿ ನಡೆದುಕೊಳ್ಳುತ್ತಿದೆಯೋ ಎಂಬುದನ್ನು ಸ್ಪಷ್ಟಪಡಿಸಬೇಕು' ಎಂದು ಆಗ್ರಹಿಸಿದರು.

'ನಿಯಮ ಬಾಹಿರವಾಗಿ ಸೃಷ್ಟಿಸಿದ ಡಿಸಿಎಂ‌ ಹುದ್ದೆಯನ್ನು ಕಾಂಗ್ರೆಸ್ ಸರ್ಕಾರ ರದ್ದುಪಡಿಸಬೇಕು. ಇಲ್ಲದಿದ್ದರೆ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಒಬ್ಬರು ಮುಖ್ಯಮಂತ್ರಿ ಹಾಗೂ ನಾಲ್ವರು ಉಪಮುಖ್ಯಮಂತ್ರಿ ನೇಮಿಸಬೇಕು' ಎಂದೂ ಒತ್ತಾಯಿಸಿದರು.

'ಸಂವಿಧಾನದ ಆಶಯಗಳಿಗೆ ಪೂರಕವಾಗಿ ಪ್ರಮಾಣವಚನ ಸ್ವೀಕರಿಸಿದ ಸಚಿವರು, ಅದಕ್ಕೆ ಬದ್ಧವಾಗಿ ನಡೆದುಕೊಳ್ಳಬೇಕು. ಆದರೆ, ಸಂವಿಧಾನದಲ್ಲಿ ಉಲ್ಲೇಖವೇ ಇರದ ಉಪಮುಖ್ಯಮಂತ್ರಿ ಹುದ್ದೆ ಬಗ್ಗೆ ಹೇಳಿಕೆ‌ ನೀಡುತ್ತಿರುವುಷು ಸರಿಯಲ್ಲ' ಎಂದು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT