ಬೆಳಗಾವಿ: ‘ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಹಾಗೂ ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
‘ರಾಜ್ಯದಲ್ಲಿ ಮಾದಕ ವಸ್ತುಗಳ ಜಾಲ ದೊಡ್ಡಮಟ್ಟದಲ್ಲಿ ವ್ಯಾಪಿಸಿದ್ದು, ಚಲನಚಿತ್ರ ರಂಗದ ನಟ-ನಟಿಯರು, ಪ್ರಭಾವಿಗಳು ಹಾಗೂ ರಾಜಕಾರಣಿಗಳ ಮಕ್ಕಳು ಇದರಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಶಾಲಾ-ಕಾಲೇಜುಗಳಲ್ಲೂ ಡ್ರಗ್ಸ್ ದಂಧೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ, ಸಮರ್ಪಕ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು’ ಎಂದು ಒತ್ತಾಯಿಸಿದರು.
‘ತನಿಖೆಯ ವಿಷಯದಲ್ಲಿ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕು’ ಎಂದು ಆಗ್ರಹಿಸಿದರು.
ಮಹಾನಗರ ಘಟಕದ ಕಾರ್ಯದರ್ಶಿ ಕಿರಣ ದುಕಾನದಾರ್, ರೋಹಿತ್ ಉಮನಾಬಾದಿಮಠ, ಅಶ್ವಿನಿ ಕಂಚಿ, ಎಸ್. ಕಾರ್ತಿಕ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.