ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಸಿಯುಗೆ ಸೌಲಭ್ಯ: ಎಬಿವಿಪಿ ಪ್ರತಿಭಟನೆ

Last Updated 12 ಸೆಪ್ಟೆಂಬರ್ 2018, 11:55 IST
ಅಕ್ಷರ ಗಾತ್ರ

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಜಾಗ ಹಸ್ತಾಂತರ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಗರ ಘಟಕದ ಸದಸ್ಯರು ಬುಧವಾರ ಪ್ರತಿಭಟನೆ ನಡೆಸಿದರು.

ತಾಲ್ಲೂಕಿನ ಭೂತರಾಮನಹಟ್ಟಿ ಬಳಿಯ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ವಿಶ್ವವಿದ್ಯಾಲಯವು ಕಾರ್ಯನಿರ್ವಹಿಸುತ್ತಿದೆ. ಆ ಕ್ಯಾಂಪಸ್‌ ಒಂದರಲ್ಲೇ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಹೀಗಾಗಿ, ಜಾಗವನ್ನು ವಿಶ್ವವಿದ್ಯಾಲಯದ ಹೆಸರಿಗೆ ಹಸ್ತಾಂತರಿಸುವಂತೆ ಹಿಂದಿನಿಂದಲೂ ಹೋರಾಟ ನಡೆಯುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಪ್ರಸ್ತಾವವನ್ನೂ ಸಲ್ಲಿಸಲಾಗಿದೆ. ಆದರೆ, ಈವರೆಗೂ ಬೇಡಿಕೆ ಈಡೇರಿಲ್ಲ. ಇದರಿಂದಾಗಿ ಕ್ಯಾಂಪಸ್‌ನ ಸ್ಥಿತಿ ಸುಧಾರಿಸುವುದಕ್ಕೆ ಅಡಚಣೆ ಉಂಟಾಗುತ್ತಿದೆ ಎಂದು ತಿಳಿಸಿದರು.

ಕೊಠಡಿಗಳು ಕಡಿಮೆ ಇರುವುದರಿಂದ, ಪಾಳಿಯಲ್ಲಿ ತರಗತಿಗಳನ್ನು ನಡೆಸಲಾಗುತ್ತಿದೆ. ಸಮರ್ಪಕ ಪ್ರಯೋಗಾಲಯ, ಗ್ರಂಥಾಲಯ, ಜಿಮ್‌ ಹಾಗೂ ಮೈದಾನವಿಲ್ಲ. ಕ್ಯಾಂಟೀನ್‌ ಇಲ್ಲ. ನಗರದಿಂದ 20 ಕಿ.ಮೀ. ದೂರದಲ್ಲಿರುವ ಈ ಕ್ಯಾಂಪಸ್‌ಗೆ ಬಸ್‌ ಸೌಲಭ್ಯವಿಲ್ಲ. 250 ವಿದ್ಯಾರ್ಥಿಗಳಿಗಷ್ಟೇ ಹಾಸ್ಟೆಲ್‌ ಒದಗಿಸಲಾಗಿದೆ. ಇವೆಲ್ಲ ಕಾರಣಗಳು ಪ್ರವೇಶಾತಿಯ ಮೇಲೆ ಪರಿಣಾಮ ಬೀರುತ್ತಿವೆ. ಸರ್ಕಾರ ಇತ್ತ ಗಮನಹರಿಸಬೇಕು. ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ನಗರ ಕಾರ್ಯದರ್ಶಿ ರೋಹಿತ್ ಉಮನಾಬಾದಿಮಠ, ಮುಖಂಡರಾದ ಸಚಿನ್ ಹಿರೇಮಠ, ವಿದ್ಯಾ ಪಾಟೀಲ, ಸಾಗರ್‌ ತೇಲಿ, ತ್ರಿವೇಣಿ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT