ಬುಧವಾರ, ಮೇ 12, 2021
18 °C

ಎಲ್ಲರಿಗೂ ಲ್ಯಾಪ್‌ಟಾಪ್‌: ಎಬಿವಿಪಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಥಣಿ: ಪದವಿ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೂ ಸರ್ಕಾರದಿಂದ ಉಚಿತವಾಗಿ ಲ್ಯಾಪ್‌ಟಾಪ್‌ ನೀಡುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸೋಮವಾರ ತರಗತಿಗಳಿಂದ ದೂರ ಉಳಿದು, ಇಲ್ಲಿನ ಡಾ.ಬಿ.ಆರ್. ಅಂಬೇಡ್ಕರ್‌ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

‘ಈ ಹಿಂದಿನ ಸರ್ಕಾರದಲ್ಲಿ ಎರಡು ವರ್ಷಗಳಿಂದಲೂ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿರಲಿಲ್ಲ. ಆದರೆ, ಬಿಜೆಪಿ ಸರ್ಕಾರದಲ್ಲಿ ಪ್ರಸಕ್ತ ಸಾಲಿನಲ್ಲಿ ಪ್ರವೇಶ ಪಡೆದ ಅಂದರೆ ಪದವಿಯ ಪ್ರಥಮ ವರ್ಷದವರಿಗೆ ಮಾತ್ರ ಲ್ಯಾಪ್‌ಟಾಪ್‌ ನೀಡುವುದರಿಂದ 2 ಹಾಗೂ 3ನೇ ವರ್ಷದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ’ ಎಂದು ದೂರಿದರು.

ವಿದ್ಯಾರ್ಥಿ ಮುಖಂಡ ಅಭಯ ಸಗರಿ ಮಾತನಾಡಿ, ‘ವಿದ್ಯಾರ್ಥಿಗಳಿಗೆ ನ್ಯಾಯ ಸಿಗುವವರೆಗೂ ಪ್ರತಿಭಟನೆ ಮುಂದುವರಿಸುತ್ತೇವೆ’ ಎಂದರು.

ವಿದ್ಯಾರ್ಥಿಗಳಾದ ವಿಶ್ವನಾಥ ಹರೋಲಿ, ಸಂತೋಷ ಪಟ್ಟಣ, ಗುರು ಖೋತ, ರಾಜು ಬಿಜಾಪೂರ, ಅಮೀತ ಹರೋಲಿ, ಕೇದಾರಿ ತೆಲಸಂಗ, ಬಸವರಾಜ ಶಿಂಗೆ, ಸಂತೋಷ ಗುಡ್ಡಾಪೂರ, ಅನಿಮೇಶ ಅಣೆಪ್ಪನವರ, ಕೀರ್ತಿ ಕೋಟಿ, ಭಾಗ್ಯಶ್ರೀ ತಾಂವಶಿ ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು