ಭಾನುವಾರ, ನವೆಂಬರ್ 1, 2020
19 °C

ಲಂಚ ಪ್ರತಿಬಂಧಕ ಕಾಯ್ದೆ: ಕಾರ್ಯಾಗಾರ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಉತ್ತರ ವಲಯದಿಂದ ಲಂಚ ಪ್ರತಿಬಂಧಕ ಕಾಯ್ದೆ-1988 (ತಿದ್ದುಪಡಿ-2018)ಗೆ ಸಂಬಂಧಿಸಿದಂತೆ ಮೂರು ದಿನಗಳ ಕಾರ್ಯಾಗಾರ ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಆರಂಭಗೊಂಡಿದೆ.

ಬೆಂಗಳೂರಿನ ಎಸಿಬಿ ಕೇಂದ್ರ ಕಚೇರಿಯ ಐಜಿಪಿ ಎಂ. ಚಂದ್ರಶೇಖರ ಅವರು ಸೋಮವಾರ ಕಾರ್ಯಾಗಾರವನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಇಲ್ಲಿನ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ವಿಜಯ ಎನ್.ವಿ., ರಾಜ್ಯ ಮಾಹಿತಿ ಆಯೋಗದ ಬೆಳಗಾವಿ ಪೀಠದ ಆಯುಕ್ತೆ ಗೀತಾ ಬಿ.ವಿ., ಧಾರವಾಡ ಹೈಕೋರ್ಟ್‌ ವಿಶೇಷ ಸಾರ್ವಜನಿಕ ಅಭಿಯೋಜಕ ಮಲ್ಲಿಕಾರ್ಜುನ ಹಿರೇಮಠ ಉಪಸ್ಥಿತರಿದ್ದರು.

ಮಲ್ಲಿಕಾರ್ಜುನ ಹಿರೇಮಠ, ಹುಬ್ಬಳ್ಳಿಯ ವಕೀಲ ಶಂಕರ ಹೆಗಡೆ, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು ಭ್ರಷ್ಟಾಚಾರ ಪ್ರಕರಣಗಳ ತನಿಖೆಯ ಬಗ್ಗೆ ಉಪನ್ಯಾಸ ನೀಡಿದರು. ಕಾರ್ಯಾಗಾರದಲ್ಲಿ ಭ್ರಷ್ಟಾಚಾರ ನಿಗ್ರಹದ ದಳದ ಉತ್ತರ ವಲಯ, ಪೂರ್ವ ವಲಯ, ಪಶ್ಚಿಮ ವಲಯ, ಈಶಾನ್ಯ ವಲಯ, ಬಳ್ಳಾರಿ ವಲಯದ ಎಸ್ಪಿಗಳು, ಎಎಸ್ಪಿಗಳು, ಇನ್‌ಸ್ಪೆಕ್ಟರ್‌ಗಳು, ಎಚ್‌ಸಿ, ಪಿಸಿ ದರ್ಜೆಯ 200 ಮಂದಿ ಭಾಗವಹಿಸಿದ್ದರು. ವಿಡಿಯೊ ಕಾನ್ಪರನ್ಸ್ ಮೂಲಕ ರಾಜ್ಯದ ಎಲ್ಲ ಭ್ರಷ್ಟಾಚಾರ ನಿಗ್ರಹದ ದಳ ವಲಯಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

ಎಸಿಬಿ ಉತ್ತರ ವಲಯ ಎಸ್ಪಿ ಬಿ.ಎಸ್. ನೇಮಗೌಡರ ನೇತೃತ್ವದಲ್ಲಿ ನಡೆಯುತ್ತಿರುವ ಈ ಕಾರ್ಯಾಗಾರ ಅ. 14ರಂದು ಮುಕ್ತಾಯವಾಗಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು