ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರೇಬಾಗೇವಾಡಿ | ಲಾರಿ-ಟ್ರ್ಯಾಕ್ಟರ್ ಮಧ್ಯೆ ಅಪಘಾತ: ಚಾಲಕ ಸಾವು

Published 7 ಏಪ್ರಿಲ್ 2024, 3:59 IST
Last Updated 7 ಏಪ್ರಿಲ್ 2024, 3:59 IST
ಅಕ್ಷರ ಗಾತ್ರ

ಹಿರೇಬಾಗೇವಾಡಿ: ಸಮೀಪದ ಹಲಗಾ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರ್ಯಾಕ್ಟರ್ ಹಾಗೂ ಲಾರಿ ಮಧ್ಯೆ ಭಾನುವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಟ್ರ್ಯಾಕ್ಟರ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಸ್ತವಾಡ ಗ್ರಾಮದ ಮಲ್ಲಪ್ಪ ದೊಡ್ಡಕಲ್ಲಣ್ಣವರ(41) ಮೃತರು.

ಬೆಳಗಾವಿಗೆ ಕೊತ್ತಂಬರಿ ಸೊಪ್ಪನ್ನು ಟ್ರ್ಯಾಕ್ಟರ್‌ನಲ್ಲಿ ಸಾಗಿಸಲಾಗುತ್ತಿತ್ತು. ಈ ವೇಳೆ ಹಿಂದಿನಿಂದ ಬಂದ ಮಹಾರಾಷ್ಟ್ರ ಮೂಲದ ಲಾರಿ ಡಿಕ್ಕಿ ಹೊಡೆದಿದೆ.

ಘಟನಾ ಸ್ಥಳಕ್ಕೆ ಹಿರೇಬಾಗೇವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ಟ್ರ್ಯಾಕ್ಟರ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಎರಡೂ ವಾಹನಗಳನ್ನು ತೆರವುಗೊಳಿಸುವ ಕಾರ್ಯ ನಡೆದಿದೆ‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT