ಎಂ.ಕೆ.ಹುಬ್ಬಳ್ಳಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ-4ರ ಮಲಪ್ರಭಾ ನದಿ ಸೇತುವೆ ಬಳಿ ಹೆದ್ದಾರಿ ಪಕ್ಕದ ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದಿದ್ದು, ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ಸಂಜೆ ನಡೆದಿದೆ.

ಹುಬ್ಬಳ್ಳಿ ನಗರದ ವೀರಾಪುರ ಓಣಿಯ ನಿವಾಸಿ ರುದ್ರಯ್ಯ ಶಿದ್ದಲಿಂಗಯ್ಯ ದಂಡಾವತಿಮಠ (28) ಮೃತ ವ್ಯಕ್ತಿ. ಬೈಕ್ ಚಲಾಯಿಸುತ್ತಿದ್ದ ಅದೇ ನಗರದ ಪ್ರಶಾಂತ ಮನೋಹರ ತಾಳಿಕೋಟಿ (35) ಗಂಭೀರವಾಗಿ ಗಾಯಗೊಂಡಿದ್ದು, ಬೆಳಗಾವಿ ಆಸ್ಫತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಹುಬ್ಬಳ್ಳಿಯಿಂದ ಬೆಳಗಾವಿಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಸ್ಥಳಕ್ಕೆ ಕಿತ್ತೂರು ಠಾಣೆ ಪೊಲೀಸರು ಭೇಟಿನೀಡಿ ಪರಿಶೀಲಿಸಿದ್ದಾರೆ.