ಹಿರೇಬಾಗೇವಾಡಿ: ಕಣಗಲಾದಿಂದ ಸಿಲಿಂಡರ್‌ಗಳನ್ನು ತುಂಬಿಕೊಂಡು ಹುಬ್ಬಳ್ಳಿಗೆ ಹೊರಟಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಇಲ್ಲಿನ ಕಮಕಾರಟ್ಟಿ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇತುವೆಗೆ ಡಿಕ್ಕಿ ಹೊಡೆದಿದೆ.
ಹೆದ್ದಾರಿ ಪಕ್ಕ ಸರ್ವಿಸ್ ರಸ್ತೆ ಇದ್ದು, ಭಾರಿ ಅನಾಹುತ ತಪ್ಪಿದಂತಾಗಿದೆ. ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರು ಮತ್ತು ಹೆದ್ದಾರಿ ಗಸ್ತು ಸಿಬ್ಬಂದಿ ಆಗಮಿಸಿ ಪರಿಶೀಲಿಸಿದರು.
ಎಲ್ ಪಿಜಿ ಸಿಲೆಂಡರ್ ಸಾಗಿಸುತ್ತಿದ್ದ ವಾಹನ ಶನಿವಾರ ಕಮಕಾರಟ್ಟಿ ಗ್ರಾಮದ ಸಮೀಪ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿರುವುದು.