ನಿಪ್ಪಾಣಿ: ಹಾಲು ಸಾಗಿಸುವ ವಾಹನ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೊಬ್ಬ ಗಾಯಗೊಂಡ ಘಟನೆ ನಗರದಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.
ಮಹಾರಾಷ್ಟ್ರದ ಕೊಲ್ಹಾಪೂರ ಜಿಲ್ಲೆಯ ಕಾಗಲ್ ತಾಲ್ಲೂಕಿನ ಬೋಳಾವಿ ಗ್ರಾಮದ ಶಂಕರ ಈಶ್ವರ ಪಸಾರೆ(55) ಮೃತರು. ಕಾಗಲ್ ತಾಲ್ಲೂಕಿನ ಹಣಬರವಾಡಿಯ ರವಿಂದ್ರ ಜ್ಞಾನದೇವ ಪವಾರ ಗಾಯಗೊಂಡವರು.
ಮಹಾರಾಷ್ಟ್ರದ ಅರಣ್ಯ ಇಲಾಖೆ ನೌಕರರಾಗಿದ್ದು, ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಇಲಾಖೆಯ ಸಭೆಯಲ್ಲಿ ಪಾಲ್ಗೊಂಡು ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಸ್ಥಳೀಯ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.