ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ ಬಳಿ ಬಸ್ಸಿಗೆ ಡಿಕ್ಕಿ ಹೊಡೆದ ಬೈಕ್‌: ಮೂವರಿಗೆ ಗಾಯ

Published 23 ಫೆಬ್ರುವರಿ 2024, 18:52 IST
Last Updated 23 ಫೆಬ್ರುವರಿ 2024, 18:52 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಗಾಂಧಿ ನಗರ ಹೊರವಲಯದಲ್ಲಿ ಶುಕ್ರವಾರ ರಾತ್ರಿ ಬಸ್ಸಿಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಿಂತಿದ್ದ ಬಸ್ಸಿಗೆ ಬೈಕ್‌ ಸವಾರ ವೇಗವಾಗಿ ಬಂದು ಹಿಂಬದಿಯಿಂದ ಡಿಕ್ಕಿ ಹೊಡೆಸಿದರು. ಬೈಕಿನಲ್ಲಿದ್ದ 30 ವರ್ಷದ ಪುರುಷ, 26 ವರ್ಷದ ಮಹಿಳೆ ಹಾಗೂ ಒಂದು ಮಗು ಗಾಯಗೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಬಸ್ಸಿನಲ್ಲಿದ್ದ ಜನ ಇವರನ್ನು ಸಂತೈಸಿದರು. ಆರೋಗ್ಯ ಕವಚ–108 ಆಂಬುಲೆನ್ಸ್‌ ಕರೆಯಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ಗಾಯಗೊಂಡವರ ಹೆಸರು, ಊರು ಇನ್ನೂ ಗೊತ್ತಾಗಬೇಕಿದೆ. ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT