ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕೋಡಿ | ವಿಷದ ಕಾಳು ತಿನ್ನಿಸಿ 8 ನವಿಲುಗಳ ಹತ್ಯೆ: ಆರೋಪಿ ಬಂಧನ

Published 13 ಜನವರಿ 2024, 14:49 IST
Last Updated 13 ಜನವರಿ 2024, 14:49 IST
ಅಕ್ಷರ ಗಾತ್ರ

ಚಿಕ್ಕೋಡಿ(ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಮಾಂಜರಿಯಲ್ಲಿ ಶುಕ್ರವಾರ ಎಂಟು ನವಿಲುಗಳಿಗೆ ವಿಷ ಮಿಶ್ರಿತ ಕಾಳುಗಳನ್ನು ತಿನ್ನಿಸಿ ಕೊಂದ ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳಿಗೆ ಹುಡುಕಾಟ ನಡೆದಿದೆ.

ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಝಳಕಿಯ ಮಂಜುನಾಥ ಪವಾರ ಬಂಧಿತ. ವಿಷದ ಕಾಳು ತಿಂದ ನವಿಲುಗಳು ಕಬ್ಬಿನ ಗದ್ದೆಯಲ್ಲಿ ಅಲ್ಲಲ್ಲಿ ಸತ್ತುಬಿದ್ದಿದ್ದವು. ಇದನ್ನು ಕಂಡು ರೈತರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.

‘ವಿಷ ಪ್ರಾಷಣದಿಂದ ಮೂರು ಹೆಣ್ಣು ಮತ್ತು ಐದು ಗಂಡು ನವಿಲು ಮೃತಪಟ್ಟಿವೆ. ಮಾಂಸಕ್ಕಾಗಿ ನವಿಲುಗಳನ್ನು ಕೊಂದಿರುವ ಶಂಕೆ ಇದ್ದು, ತನಿಖೆ ನಡೆಸುತ್ತಿದ್ದೇವೆ. ಈ ಪ್ರಕರಣದಲ್ಲಿ ಪರಾರಿಯಾದ ಇನ್ನಿಬ್ಬರ ಬಂಧನಕ್ಕಾಗಿ ಎರಡು ವಿಶೇಷ ತಂಡ ರಚಿಸಿದ್ದೇವೆ. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವ್ಹಾಣ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ’ ಎಂದು ರಾಯಬಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುನೀತಾ ನಿಂಬರಗಿ ‘ಪ್ರಜಾವಾಣಿ’ಗೆ ತಿಳಿಸಿದರು.

‘ನವಿಲುಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರ, ಅವುಗಳ ಸಾವಿಗೆ ಸಂಬಂಧಿಸಿ ಇನ್ನಷ್ಟು ಮಾಹಿತಿ ತಿಳಿಯಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT