ಬೆಳಗಾವಿ: ಖಾನಾಪುರ ತಾಲ್ಲೂಕಿನ ಭೀಮಗಡ ಅಭಯಾರಣ್ಯದಲ್ಲಿ ವಾಸಿಸುತ್ತಿರುವ ತಳೇವಾಡಿ ಗ್ರಾಮಸ್ಥರನ್ನು ಸ್ಥಳಾಂತರಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಶನಿವಾರ ಗ್ರಾಮಸ್ಥರ ಸಭೆ ನಡೆಸಿ, ಅಭಿಪ್ರಾಯ ಸಂಗ್ರಹಿಸಿದರು.

ಭೀಮಗಡ ನೇಚರ್ ಕ್ಯಾಂಪ್ ಆವರಣದಲ್ಲಿ ಅಧಿಕಾರಿಗಳು ಮತ್ತು ಗ್ರಾಮಸ್ಥರ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ‘ಅಭಯಾರಣ್ಯದಿಂದ ಹೊರಬರಲು ಇಚ್ಛಿಸುವ ಕುಟುಂಬಗಳಿಗೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಪುನರ್ವಸತಿ ಕಲ್ಪಿಸಲಾಗುವುದು’ ಎಂದು ಭರವಸೆ ನೀಡಿದರು.

‘ಅಭಯಾರಣ್ಯದಲ್ಲಿ ವಾಸಿಸುವ ಜನರಿಗೆ ರಸ್ತೆ, ನೀರು, ವಿದ್ಯುತ್ ಮತ್ತಿತರ ಮೂಲಸೌಕರ್ಯಗಳನ್ನು ಕಲ್ಪಿಸುವುದು ಸಾಧ್ಯವಾಗುತ್ತಿಲ್ಲ. ಆದ್ದರಿಂದ ತಳೇವಾಡಿ ಗ್ರಾಮದ ಜನರು ಸ್ವ ಇಚ್ಛೆಯಿಂದ ಸ್ಥಳಾಂತರಕ್ಕೆ ಒಪ್ಪಿಗೆ ನೀಡಿದರೆ ತಕ್ಷಣವೇ ಎಲ್ಲ ರೀತಿಯ ನೆರವು ಕಲ್ಪಿಸಲಾಗುವುದು’ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮಸ್ಥರು, ಎಲ್ಲ ಕುಟುಂಬಗಳಿಗೆ ಪರ್ಯಾಯ ಜಾಗೆ ಮತ್ತು ಮನೆಯನ್ನು ಒದಗಿಸಬೇಕು ಎಂದು ಮನವಿ ಮಾಡಿಕೊಂಡರು.

ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ, ‘ಸರ್ಕಾರದ ಮಾರ್ಗಸೂಚಿ ಪ್ರಕಾರ ವ್ಯವಸ್ಥೆ ಮಾಡಲಾಗುವುದು’ ಎಂದರು.

ಗ್ರಾಮಸ್ಥರ ಬಳಿ ಇರುವ ದಾಖಲೆಗಳನ್ನು ಪರಿಶೀಲಿಸಬೇಕು ಹಾಗೂ ಪುನರ್ವಸತಿಗಾಗಿ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನದ ಬಳಕೆಗೆ ಅನುಕೂಲವಾಗುವಂತೆ ಜಿಲ್ಲಾಧಿಕಾರಿ ಮತ್ತು ಪುನರ್ವಸತಿ ಸಮಿತಿಯ ಸದಸ್ಯ ಕಾರ್ಯದರ್ಶಿ ಹೆಸರಿನಲ್ಲಿ ಜಂಟಿ ಖಾತೆ ತೆರೆಯುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನವನ್ನು ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಡಿಸಿಎಫ್ ಮರಿಯಾ ಕ್ರಿಸ್ತುರಾಜಾ, ಎಸಿಎಫ್ ಸುನೀತಾ ನಿಂಬರಗಿ, ಖಾನಾಪುರ ತಹಶೀಲ್ದಾರ ಪ್ರಕಾಶ್ ಗಾಯಕವಾಡ ಸೇರಿದಂತೆ ಅರಣ್ಯ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ತಳೇವಾಡಿ ಗ್ರಾಮದ ಜನರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.