ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ ಗಾಂಜಾ ಪ್ರಕರಣ ವಿಚಾರಣೆ: ಎಡಿಜಿಪಿ ಅಲೋಕ್‌ ಕುಮಾರ್

Last Updated 2 ಫೆಬ್ರುವರಿ 2023, 0:00 IST
ಅಕ್ಷರ ಗಾತ್ರ

ಬೆಳಗಾವಿ: ಗಾಂಜಾ ಪ್ರಕರಣ ಮುಚ್ಚಿಹಾಕಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ, ಇಲ್ಲಿನ ಟಿಳಕವಾಡಿ ಪೊಲೀಸ್ ಠಾಣೆ ಅಧಿಕಾರಿಗಳು ಮತ್ತು ಸಿಬ್ಬಂದಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್‌ಕುಮಾರ್ ಟ್ವೀಟ್‌ ಮಾಡಿದ್ದಾರೆ.

‘ನಗರದ ಕೆಲವು ಶಾಲೆ– ಕಾಲೇಜು ಸುತ್ತ ಗಾಂಜಾ ಮಾರಾಟ ನಡೆಯುತ್ತಿದೆ. ಜ.28ರಂದು ರಾತ್ರಿ ಗಾಂಜಾದೊಂದಿಗೆ ಸಿಕ್ಕಿಬಿದ್ದ ಇಬ್ಬರು ವ್ಯಕ್ತಿಗಳ ವಿರುದ್ಧ ಟಿಳಕವಾಡಿ ಠಾಣೆ ಪೊಲೀಸ್‌ ಅಧಿಕಾರಿಗಳು ಪ್ರಕರಣ ದಾಖಲಿಸಿಲ್ಲ’ ಎಂದು ಶ್ರೀರಾಮ ಸೇನೆ ಹಿಂದೂಸ್ತಾನ್ ಅಧ್ಯಕ್ಷ ರಮಾಕಾಂತ್ ಕೊಂಡುಸ್ಕರ್‌ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದರು.

ಇದಕ್ಕೆ ಸಂಬಂಧಿಸಿ ಟ್ವೀಟ್‌ ಮಾಡಿದ ಅಲೋಕ್‌ಕುಮಾರ್‌, ‘ಈ ಪ್ರಕರಣಕ್ಕೆ ಸಂಬಂಧಿಸಿ ಎಫ್‌ಐಆರ್‌ ಮಾಡುತ್ತೇವೆ. ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾತ್ರವಿದೆಯೇ ಎಂಬ ಬಗ್ಗೆ ವಿಚಾರಣೆ ಕೈಗೊಳ್ಳಲಾಗುತ್ತಿದೆ’ ಎಂದು ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT