ಶನಿವಾರ, 10 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಗಡಿಯಲ್ಲಿ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಿ -ಎಡಿಜಿಪಿ ಉಮೇಶ್ ಕುಮಾರ್

Last Updated 3 ಆಗಸ್ಟ್ 2021, 14:46 IST
ಅಕ್ಷರ ಗಾತ್ರ

ಬೆಳಗಾವಿ: ‘ಕೋವಿಡ್–19 ಮೂರನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ಗಡಿಯಲ್ಲಿ ನಿಗಾ ವಹಿಸಬೇಕು. ಸರ್ಕಾರದ ಮಾರ್ಗಸೂಚಿ ಪಾಲನೆ ಆಗುವಂತೆ ನೋಡಿಕೊಳ್ಳಬೇಕು’ ಎಂದು ಎಡಿಜಿಪಿ ಉಮೇಶ್‌ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಿಪ್ಪಾಣಿ ತಾಲ್ಲೂಕಿನ ಕೊಗನೊಳ್ಳಿ ಚೆಕ್‌ಪೋಸ್ಟ್‌ಗೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದ ನಂತರ ನಗರದಲ್ಲಿ ಅಧಿಕಾರಿಗಳ ಸಭೆ ನಡೆಸಿದರು.

‘ಯಾವುದೇ ಕಾರಣಕ್ಕೂ ಮಾರ್ಗಸೂಚಿ ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕು. ಮಹಾರಾಷ್ಟ್ರದಿಂದ ಬೆಳಗಾವಿಗೆ ಬರುವ ಪ್ರಯಾಣಿಕರ ಆರ್‌ಟಿಪಿಸಿಆರ್ ವರದಿ ಕಡ್ಡಾಯವಾಗಿ ಪರಿಶೀಲನೆ ನಡೆಸಬೇಕು. ನೆಗೆಟಿವ್ ವರದಿ ಇದ್ದವರಿಗೆ ಮಾತ್ರ ಪ್ರವೇಶ ನೀಡಬೇಕು. ಇಲ್ಲದವರನ್ನು ವಾಪಸ್ ಕಳುಹಿಸಬೇಕು. ಈ ಮೂಲಕ ಸೋಂಕು ಹರಡದಂತೆ ತಡೆಯಲು ಕಟ್ಟುನಿಟ್ಟಿನ ಕ್ರಮ ವಹಿಸಬೇಕು’ ಎಂದರು.

ಗಡಿ ಭಾಗದಲ್ಲಿ ಈಗಾಗಲೇ 22 ಚೆಕ್‌ಪೋಸ್ಟ್‌ಗಳನ್ನು ಮಾಡಲಾಗಿದೆ. ನಿಗಾ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಉತ್ತರ ವಲಯ ಐಜಿಪಿ ಸತೀಶ್‌ಕುಮಾರ್, ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್, ಎಸ್ಪಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯ್ತಿ ಸಿಇಒ ಎಚ್‌.ವಿ. ದರ್ಶನ್‌ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT