ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಫಾರ್ಮಸಿ ವಿದ್ಯಾರ್ಥಿಗಳಿಗೆ ತರಬೇತಿ ಆರಂಭ

Last Updated 17 ಫೆಬ್ರುವರಿ 2021, 15:52 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ನೆಹರೂ ನಗರದಲ್ಲಿರುವ ಕೆಎಲ್‌ಇ ಫಾರ್ಮಸಿ ಕಾಲೇಜಿನಲ್ಲಿ ಫಾರ್ಮಸಿ ಪ್ರಾಕ್ಟೀಸ್ ವಿಭಾಗದಿಂದ ವಿದ್ಯಾರ್ಥಿಗಳಿಗೆ ಒಂದು ವಾರದವರೆಗೆ ಹಮ್ಮಿಕೊಂಡಿರುವ ಸುಧಾರಿತ ಶೈಕ್ಷಣಿಕ ತರಬೇತಿ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಲಾಯಿತು.

ಮುಖ್ಯಅತಿಥಿಯಾಗಿದ್ದ ಮೈಸೂರಿನ ಜೆಎಸ್‌ಎಸ್ ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿ ಕುಲಪತಿ ಮತ್ತು ಭಾರತೀಯ ಫಾರ್ಮಸಿ ಕೌನ್ಸಿಲ್‌ ಅಧ್ಯಕ್ಷ ಡಾ.ಬಿ. ಸುರೇಶ್ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ‘ದೇಶದಲ್ಲಿ ಫಾರ್ಮಸಿ ಶಿಕ್ಷಣ ಹಾಗೂ ವೃತ್ತಿ ಅತ್ಯಗತ್ಯವಾಗಿದ್ದು, ಮಹತ್ವದ ಸ್ಥಾನ ಪಡೆದಿದೆ. ವಿದ್ಯಾರ್ಥಿಗಳು ಕ್ಲಿನಿಕಲ್‌ ಕ್ಷೇತ್ರದಲ್ಲಿ ತೊಡಗಿಕೊಳ್ಳುವುದಕ್ಕೆ ಪೂರಕವಾಗಿ ಕಾಲೇಜುಗಳು ಸಂಬಂಧಿಸಿದ ಕೈಗಾರಿಕೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಬೇಕು. ಈ ಮೂಲಕ ಪದವೀಧರರ ಕೌಶಲ ವೃದ್ಧಿಗೆ ಆದ್ಯತೆ ಕೊಡಬೇಕು’ ಎಂದು ಸಲಹೆ ನೀಡಿದರು.

ಕೆಎಲ್‌ಇ ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿ ಕುಲಪತಿ ಪ್ರೊ.ವಿವೇಕ ಸಾವೊಜಿ ಅಧ್ಯಕ್ಷತೆ ವಹಿಸಿದ್ದರು.

ಕಾಲೇಜಿನ ಪ್ರಾಚಾರ್ಯ ಪ್ರೊ.ಸುನೀಲ್ ಎಸ್.ಜಲಾಲಪುರೆ, ಡೀನ್ ಪ್ರೊ.ಎಂ.ಎಸ್. ಗಣಾಚಾರಿ, ಉಪ ಪ್ರಾಂಶುಪಾಲ ಡಾ.ಎಂ.ಬಿ. ಪಾಟೀಲ ಇದ್ದರು.

ಗೀತಾಂಜಲಿ ಸಾಲಿಮಠ ಸ್ವಾಗತಿಸಿದರು. ಐಶ್ವರ್ಯಾ ಹಿರೇಮಠ ನಿರೂಪಿಸಿದರು. ಅನುಶ್ರೀ ದೇಶಪಾಂಡೆ ವಂದಿಸಿದರು.

300 ವಿದ್ಯಾರ್ಥಿಗಳು ತರಬೇತಿಯಲ್ಲಿ ಪಾಲ್ಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT