ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗೋಕಾಕ: ಗುಣಮಟ್ಟದ ಶಿಕ್ಷಣ ನೀಡಲು ಸಲಹೆ

Published 14 ಜನವರಿ 2024, 15:48 IST
Last Updated 14 ಜನವರಿ 2024, 15:48 IST
ಅಕ್ಷರ ಗಾತ್ರ

ಗೋಕಾಕ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಸಂಸ್ಕಾರ ನೀಡಿ ಅವರನ್ನು ಒಳ್ಳೆಯ ನಾಗರಿಕರನ್ನಾಗಿ ಮಾಡಬೇಕು ಎಂದು ಶಿಕ್ಷಣ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಗಜಾನನ ಮನ್ನಿಕೇರಿ ಹೇಳಿದರು.

ನಗರದ ಮಯೂರ ಇಂಗ್ಲಿಷ್‌ ಮಾಧ್ಯಮ ಪ್ರೌಢಶಾಲೆಯ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಪಾಲಕರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರ ಹಾಗೂ ಸಂಸ್ಥೆಗಳು ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು, ಇದರ ಸದುಪಯೋಗಪಡಿಸಿಕೊಳ್ಳಿ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಚೇರಮನ್ ಹಾಗೂ ವಿಧಾನಪರಿಷತ್‌ ಸದಸ್ಯ ಲಖನ್ ಜಾರಕಿಹೊಳಿ ಅವರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ, ಸತ್ಕರಿಸಿ ಗೌರವಿಸಿದರು.

ಸಂಸ್ಥೆಯ ಉಪಾಧ್ಯಕ್ಷೆ ಸಂಧ್ಯಾ ಲಖನ್ ಜಾರಕಿಹೊಳಿ, ಕಾರ್ಯದರ್ಶಿ ಸದಾನಂದ ಕಲಾಲ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ, ಆಡಳಿತಾಧಿಕಾರಿ ಎಸ್.ಡಿ.ಮುರಗೋಡ, ಮುಖ್ಯ ಶಿಕ್ಷಕಿ ಚೇತನಾ ಪಾಗದ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT