ಮಂಗಳವಾರ, ಮಾರ್ಚ್ 21, 2023
29 °C

ಪ್ರಕರಣ ರಾಜಿಗೆ ವಕೀಲರು ಸಲಹೆ ನೀಡಲಿ: ನ್ಯಾಯಾಧೀಶ ವಿಜಯಕುಮಾರ ಆನಂದಶೆಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗೋಕಾಕ: ‘ಆ.14ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ಬಾಕಿ ಉಳಿದಿರುವ ಪ್ರಕರಣಗಳನ್ನು ರಾಜಿ–ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಕಕ್ಷಿದಾರರು ಮುಂದಾಗಬೇಕು. ಈ ನಿಟ್ಟಿನಲ್ಲಿ ವಕೀಲರು ಅವರಿಗೆ ನೀಡುವ ಸಲಹೆ ಬಹುಮುಖ್ಯವಾಗುತ್ತದೆ’ ಎಂದು 12ನೇ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ವಿಜಯಕುಮಾರ ಆನಂದಶೆಟ್ಟಿ ಹೇಳಿದರು.

ನಗರದ ನ್ಯಾಯಾಲಯ ಆವರಣದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ಹೋದ ವರ್ಷ ಜರುಗಿದ ಅದಾಲತ್ ಯಶಸ್ವಿಯಾಗಲು ವಕೀಲರ ಸಹಕಾರ ಬಹುಮುಖ್ಯವಾಗಿತ್ತು. ಈ ಬಾರಿಯೂ ಕಕ್ಷಿದಾರರಿಗೆ ಸೂಕ್ತ ತಿಳಿವಳಿಕೆ ನೀಡಬೇಕು’ ಎಂದರು.

‘ಅದಾಲತ್ ಮೂಲಕ ಪ್ರಕರಣ ಇತ್ಯರ್ಥಗೊಂಡಲ್ಲಿ ಬಿನ್ನಾಭಿಪ್ರಾಯಕ್ಕೆ ಪರಿಹಾರ ಲಭಿಸುತ್ತದೆ. ಇದರೊಂದಿಗೆ ಮನಸ್ಸಿಗೆ ನೆಮ್ಮದಿಯೂ ಸಿಗುತ್ತದೆ. ಈ ನಿಟ್ಟಿನಲ್ಲಿ ಅದಾಲತ್‌ನಲ್ಲಿನ ಅವಕಾಶ ಬಳಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

‘ಚೆಕ್‌ ಬೌನ್ಸ್‌ ಪ್ರಕರಣಗಳು ಅದಾಲತ್‌ಗಳಲ್ಲಿ ಇತ್ಯರ್ಥಗೊಳ್ಳುತ್ತವೆ. ಆದರೆ, ಬಾಕಿ ಉಳಿದ ಮೊತ್ತ ವಸೂಲಿಯಾಗದೆ ತೊಂದರೆಗಳು ಹಾಗೆಯೇ ಮುಂದುವರಿಯುತ್ತಿವೆ’ ಎಂದು ವಕೀಲರು ತಿಳಿಸಿದರು.

ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶೆ ದೀಪಾ ಜಿ., 1ನೇ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶ ಕೆ.ಎಂ. ಶಂಕರ ಹಾಗೂ ವಕೀಲರ ಸಂಘದ ಅಧ್ಯಕ್ಷ ಸಿ.ಡಿ. ಹುಕ್ಕೇರಿ ಮಾತನಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು