ಬೆಳಗಾವಿ: ಹುಕ್ಕೇರಿ ಪುರಸಭೆ ಚುನಾವಣೆಯಲ್ಲಿ ಬಿಜೆಪಿ–ಕಾಂಗ್ರೆಸ್ ಅಭ್ಯರ್ಥಿಗಳು ಎಲ್ಲ 23 ವಾರ್ಡ್ಗಳಲ್ಲೂ ಸ್ಪರ್ಧಿಸಿದ್ದಾರೆ. ಆದರೆ, ವಾಸ್ತವವಾಗಿ ಶಾಸಕ, ಬಿಜೆಪಿಯ ಉಮೇಶ ಕತ್ತಿ ಹಾಗೂ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಎ.ಬಿ. ಪಾಟೀಲ ನಡುವೆಯೇ ಹಣಾಹಣಿ ನಡೆಯುತ್ತಿರುವುದು ಕಂಡುಬಂದಿದೆ.

ತಮ್ಮ ಹಿಡಿತ ಮತ್ತಷ್ಟು ಗಟ್ಟಿಗೊಳಿಸಿಕೊಳ್ಳಲು ಕತ್ತಿ ತಂತ್ರ ರೂಪಿಸಿದ್ದರೆ, ವಿಧಾನಸಭೆ ಚುನಾವಣೆಯಲ್ಲಿ ಉಂಟಾದ ಸೋಲಿನ ಸೇಡು ತೀರಿಸಿಕೊಳ್ಳಲು ಎ.ಬಿ. ಪಾಟೀಲ ಪ್ರತಿತಂತ್ರ ಎಣೆದಿದ್ದಾರೆ. ಈ ಚುನಾವಣೆಯನ್ನು ಉಭಯ ನಾಯಕರೂ ಪ್ರತಿಷ್ಠೆಯಾಗಿ ಸ್ವೀಕರಿಸಿದ್ದಾರೆ. ವೈಯಕ್ತಿಕ ವರ್ಚಸ್ಸಿನ ಮೇಲೆ ಪುರಸಭೆಯನ್ನು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳಲು ಯೋಜಿಸಿದ್ದಾರೆ. ಇದರಿಂದಾಗಿ, ಈ ಸ್ಥಳೀಯ ಸಂಸ್ಥೆಯ ಚುನಾವಣಾ ಕಣ ರಂಗೇರಿದೆ.

ಪಟ್ಟಣ ಪಂಚಾಯ್ತಿಯಾಗಿದ್ದ ಈ ನಗರ ಸ್ಥಳೀಯ ಸಂಸ್ಥೆಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ. ಇದಾದ ನಂತರ ನಡೆಯುತ್ತಿರುವ ಮೊದಲ ಚುನಾವಣೆ ಇದು. ಪಟ್ಟಣ ಪಂಚಾಯ್ತಿ ಇದ್ದಾಗ 19 ವಾರ್ಡ್ಗಳಿದ್ದವು. ಈಗ, ಜನಸಂಖ್ಯೆ ಆಧರಿಸಿ 23 ವಾರ್ಡ್ಗಳನ್ನು ರಚಿಸಲಾಗಿದೆ. 11 ವಾರ್ಡ್ಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕೂಡ ಕಣದಲ್ಲಿದ್ದಾರೆ. ಆ ಪಕ್ಷದ ಇಲ್ಲಿ ಅಷ್ಟಾಗಿ ಪ್ರಕಾಶಿಸುತ್ತಿಲ್ಲ. ಇದರಿಂದಾಗಿ ಮೇಲ್ನೋಟಕ್ಕೆ ಬಿಜೆಪಿ–ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ನೇರ ಹಣಾಹಣಿ ಇದೆ.

ಕಾಂಗ್ರೆಸ್ ಪ್ರಯತ್ನ:ಪಟ್ಟಣ ಪಂಚಾಯ್ತಿಯಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಆಗ, ಮಾಡಿದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಆ ಪಕ್ಷದ ಅಭ್ಯರ್ಥಿಗಳು ಮತ ಕೇಳುತ್ತಿದ್ದಾರೆ. ಕಾಂಗ್ರೆಸ್ನವರು, ಲೋಪದೋಷಗಳ ಮೇಲೆ ಬೆಳಕು ಚೆಲ್ಲುತ್ತಾ ಸುಧಾರಣೆಗಾಗಿ ತಮ್ಮನ್ನು ಬೆಂಬಲಿಸುವಂತೆ ಕೋರುತ್ತಿದ್ದಾರೆ.

ಈಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಉಮೇಶ ಕತ್ತಿ ಗೆಲುವಿನ ಓಟ ಮುಂದುವರಿಸಿದ್ದಾರಾದರೂ, ಹುಕ್ಕೇರಿ ಪಟ್ಟಣ ವ್ಯಾಪ್ತಿಯಲ್ಲಿ ಅವರಿಗೆ ಅಂದಾಜು 3,500 ಮತಗಳು (ಹಿಂದಿನ ಚುನಾವಣೆಗೆ ಹೋಲಿಸಿದರೆ) ಕಡಿಮೆಯಾಗಿವೆ. ಹೀಗಾಗಿ, ಜನರ ಮನಸ್ಸು ತಮ್ಮ ಕಡೆಗಿದೆ, ಈ ಚುನಾವಣೆಯಲ್ಲಿ ಅದರ ಲಾಭ ಪಡೆದುಕೊಳ್ಳಬೇಕು ಎನ್ನುವುದು ಕಾಂಗ್ರೆಸ್ನವರ ಲೆಕ್ಕಾಚಾರ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡ ಇಲ್ಲಿಗೆ ಬಂದು ಪ್ರಚಾರ ಮಾಡಿ ಹೋಗಿದ್ದಾರೆ. ಬಿಜೆಪಿಯಲ್ಲಿ ಸ್ಥಳೀಯ ನಾಯಕರು ಮಾತ್ರವೇ ಪ್ರಚಾರಕ್ಕಿಳಿದಿದ್ದಾರೆ.

ಪಿಕೆಪಿಎಸ್, ಸಕ್ಕರೆ ಕಾರ್ಖಾನೆ, ವಿದ್ಯುತ್ ಸಹಕಾರ ಸೊಸೈಟಿಗಳ ಮೇಲೆ ಉಮೇಶ ಕತ್ತಿ, ಸಹೋದರ ರಮೇಶ ಕತ್ತಿ ಹಿಡಿತವಿದೆ. ಇದು, ಪಕ್ಷಕ್ಕೆ ಲಾಭವಾಗಬಹುದು ಎನ್ನುವ ನಿರೀಕ್ಷೆ ಬಿಜೆಪಿಯವರದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.