ಮಂಗಳವಾರ, ಏಪ್ರಿಲ್ 7, 2020
19 °C

ಖಾನಾಪುರ: ಮತ್ತೊಂದು ಕಾಡುಕೋಣ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಖಾನಾಪುರ: ತಾಲ್ಲೂಕಿನ ಹರೂರಿ ಗ್ರಾಮದ ಬಳಿಯ ಬೆಳಗಾವಿ-ಲೋಂಡಾ ರೈಲು ಅಪ್ಪಳಿಸಿದ ಪರಿಣಾಮ ಕಾಡುಕೋಣ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ.

ಫೆಬ್ರುವರಿ 24 ಮತ್ತು ಮಾರ್ಚ್‌ 10ರಂದು ಇದೇ ರೈಲು ಮಾರ್ಗದಲ್ಲಿ ಒಟ್ಟು ಮೂರು ಕಾಡುಕೋಣಗಳು ಸಾವಿಗೀಡಾಗಿದ್ದವು. ಕೆಲವೇ ದಿನಗಳ ಅಂತರದಲ್ಲಿ ಮತ್ತೊಂದು ಕಾಡುಕೋಣ ಬಲಿಯಾಗಿದೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಮರಣೋತ್ತರ ಪರೀಕ್ಷೆ ಕೈಗೊಂಡರು. ಬಳಿಕ ಹರೂರಿ ಅರಣ್ಯದಲ್ಲಿ ಕಳೆಬರದ ಅಂತ್ಯಕ್ರಿಯೆ ನಡೆಸಲಾಗಿದೆ. ಲೋಂಡಾ ವಲಯ ಅರಣ್ಯ ಅಧಿಕಾರಿ ಕಚೇರಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಆರ್‌ಎಫ್‌ಒ ಪ್ರಶಾಂತ ಗೌರಾಣಿ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)