ಬೆಳಗಾವಿ: ಮಹಾರಾಷ್ಟ್ರದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದು ಆ ರಾಜ್ಯದೊಂದಿಗೆ ಗಡಿ ಹಂಚಿಕೊಂಡಿರುವ ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ. ಅಲ್ಲಿಂದ ರಾಜ್ಯಕ್ಕೆ ಬರುವವರು ‘ಕೋವಿಡ್ ನೆಗೆಟಿವ್’ ವರದಿ ತರುವುದನ್ನು ಕಡ್ಡಾಯಗೊಳಿಸಲು ಜಿಲ್ಲಾಡಳಿತ ಮುಂದಾಗಿದೆ. ಅಲ್ಲಿಂದ ಅಪಾರ ಸಂಖ್ಯೆಯಲ್ಲಿ ಸುಕ್ಷೇತ್ರ ಸವದತ್ತಿಯಲ್ಲಮ್ಮದೇವಸ್ಥಾನಕ್ಕೆ ಬರುವ ಭಕ್ತರಿಗೆ ನಿರ್ಬಂಧ ವಿಧಿಸುವ ನಿಟ್ಟಿನಲ್ಲೂ ಚರ್ಚೆ ನಡೆದಿದೆ.

ಬೆಳಗಾವಿ, ಕಾಗವಾಡ, ಅಥಣಿ, ಚಿಕ್ಕೋಡಿ, ಹುಕ್ಕೇರಿ ಹಾಗೂ ನಿಪ್ಪಾಣಿ ತಾಲ್ಲೂಕುಗಳ ಜನರು ಮಹಾರಾಷ್ಟ್ರದೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ. ಅಲ್ಲಿ ವ್ಯಾಪಾರ ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ಹೋಗುತ್ತಾರೆ. ಹಲವು ತಾಲ್ಲೂಕುಗಳ ಜನರು ಅಲ್ಲಿನ ಆಸ್ಪತ್ರೆಗಳ ಮೇಲೆಯೇ ಅವಲಂಬನೆ ಆಗಿದ್ದಾರೆ. ನಿತ್ಯವೂ ಸಾವಿರಾರು ಸಂಖ್ಯೆಯಲ್ಲಿ ಅಲ್ಲಿನವರು ಇಲ್ಲಿಗೆ, ಇಲ್ಲಿನವರು ಅಲ್ಲಿಗೆ ಸಂಚರಿಸುತ್ತಾರೆ. ಹೀಗೆ ಬರುವವರು ಹಾಗೂ ಹೋಗುವವರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದಿರುವುದು ಮತ್ತು ಇದರಿಂದ ಸಾಂಕ್ರಾಮಿಕ ಹರಡುವ ಭೀತಿ ಎದುರಾಗಿದೆ. ಜನರು ಕನಿಷ್ಠ ಮಾಸ್ಕ್ ಧರಿಸುವುದನ್ನೂ ನಿರ್ಲಕ್ಷ್ಯ ಮಾಡಿ ಓಡಾಡುತ್ತಿರುವುದು, ಕೋವಿಡ್ ನಿಯಂತ್ರಣಕ್ಕೆ ತೊಡಕಾಗಿ ಪರಿಣಮಿಸುವ ಸಾಧ್ಯತೆಗಳಿರುವುದು ಜಿಲ್ಲಾಡಳಿತದ ತಲೆನೋವಿಗೆ ಕಾರಣವಾಗಿದೆ.

ಸಾಧ್ಯತೆಗಳಿವೆ:

ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ಆ ರಾಜ್ಯದ ಸಹಸ್ರಾರು ಮಂದಿ ಬರುತ್ತಿದ್ದಾರೆ. ಆ ರಾಜ್ಯಕ್ಕೆ ಇಲ್ಲಿಂದ ಹಾಗೂ ಅಲ್ಲಿಂದ ಇಲ್ಲಿಗೆ ಸಾರಿಗೆ ಬಸ್ಗಳು ಸಂಚರಿಸುತ್ತಿವೆ. ಕೋವಿಡ್ ಲಕ್ಷಣವುಳ್ಳವರು ಕೂಡ ಇಲ್ಲಿಗೆ ಬಂದು ಹೋಗುವ ಸಾಧ್ಯತೆ ಇದೆ. ಪರಿಣಾಮ ಇಲ್ಲಿಗೂ ಸೋಂಕು ಪಸರಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ ಎನ್ನಲಾಗುತ್ತಿದೆ.

‘ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಗಡಿಯಲ್ಲಿ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಆರೋಗ್ಯ ಇಲಾಖೆಯಿಂದ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಆದರೆ, ಅದು ಅನುಷ್ಠಾನಕ್ಕೆ ಬರುತ್ತಿಲ್ಲ. ಕೋವಿಡ್ ಕಾಣಿಸಿಕೊಂಡ ವೇಳೆಯೂ ಮಹಾರಾಷ್ಟ್ರ ಸಂಪರ್ಕದಿಂದಾಗಿಯೇ ಜಿಲ್ಲೆಯು ಬಹಳ ತೊಂದರೆಗೆ ಒಳಗಾಗಿತ್ತು. ಬಳಿಕ ಎಚ್ಚೆತ್ತುಕೊಂಡ ಸರ್ಕಾರ ಅಂತರರಾಜ್ಯ ಸಂಪರ್ಕ ಬಂದ್ ಮಾಡಲಾಗಿತ್ತು.

ತಪಾಸಣೆಗೆ ನಿರ್ದೇಶನ

ಈ ಬಗ್ಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ‘ಗಡಿ ಭಾಗದಲ್ಲಿ ಕೋವಿಡ್ ಹರಡದಂತೆ ನಿಗಾ ವಹಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಮುಂಜಾಗ್ರತೆ ವಹಿಸಬೇಕು. ಮಾಸ್ಕ್ ಧರಿಸಬೇಕು. ಅಂತರ ಕಾಯ್ದುಕೊಳ್ಳಬೇಕು. ಅಂತರ ರಾಜ್ಯ ಸಾರಿಗೆ ಆರಂಭವಾಗಿದ್ದು, ಈ ಹಿಂದೆಯಂತೆಯೇ ಸುರಕ್ಷತಾ ಕ್ರಮ ಅನುಸರಿಸಲು ತಿಳಿಸಲಾಗಿದೆ. ಬಸ್ಗಳ ಸಂಚಾರ ನಿಲ್ಲಿಸುವ ಕುರಿತು ಚರ್ಚೆಯಾಗಿಲ್ಲ’ ಎಂದು ತಿಳಿಸಿದರು.

‘ಕರ್ನಾಟಕ–ಮಹಾರಾಷ್ಟ್ರ ಗಡಿಯಲ್ಲಿ ಚೆಕ್ ಪೋಸ್ಟ್ ಸ್ಥಾಪಿಸುವಂತೆ ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆ ರಾಜ್ಯದಿಂದ ಬರುವವರಿಗೆ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಪ್ರಸ್ತುತಪಡಿಸುವುದನ್ನು ಕಡ್ಡಾಯಗೊಳಿಸಲಾಗುವುದು. ಅಂತೆಯೇ, ಎಲ್ಲರ ತಪಾಸಣೆಗೂ ನಿರ್ದೇಶನ ನೀಡಲಾಗಿದೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.