ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಕಳೆದ ಸೆಮಿಸ್ಟರ್‌ ಪರೀಕ್ಷೆಗೆ ವಿರೋಧ

Last Updated 23 ಜೂನ್ 2021, 11:30 IST
ಅಕ್ಷರ ಗಾತ್ರ

ಬೆಳಗಾವಿ: ‘ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಕಳೆದ ಸೆಮಿಸ್ಟರ್‌ನ ಪರೀಕ್ಷೆ ನಡೆಸುತ್ತೇವೆ ಎಂಬ ನಿರ್ಧಾರವು ಅವೈಜ್ಞಾನಿಕ ಮತ್ತು ಆತಾರ್ಕಿಕವಾಗಿದೆ. ಅದನ್ನು ಕೂಡಲೇ ಹಿಂಪಡೆಯಬೇಕು’ ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಎಐಡಿಎಸ್‌ಒ ನೇತೃತ್ವದಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿಯೊಂದಿಗೆ ಮರಾಠಾ ಮಂಡಳ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದರು.

‘ವಾರದಿಂದ ನಡೆದ ಗೂಗಲ್ ಫಾರ್ಮ್ ಸಮೀಕ್ಷೆಯಲ್ಲಿ 40ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡು ಕಳೆದ ಸೆಮಿಸ್ಟರ್ ಪರೀಕ್ಷೆಯನ್ನು ಪ್ರಚಲಿತ ಸೆಮಿಸ್ಟರ್ ನಡುವೆ ನಡೆಸುವುದು ಬೇಡ ಎಂಬ ಅಭಿಪ್ರಾಯ ಮಂಡಿಸಿದ್ದಾರೆ. ಸರ್ಕಾರ ಯಾವುದೇ ನಿರ್ಧಾರ ಕೈಗೊಂಡರೂ, ಪ್ರಜಾಸತ್ತಾತ್ಮಕ ಚರ್ಚೆಯ ನಂತರವೇ ಮಾಡಬೇಕು ಎನ್ನುವುದು ನಮ್ಮ ಬೇಡಿಕೆಯಾಗಿದೆ’ ಎಂದರು.

‘ಸಂಬಂಧಪಟ್ಟವರ ಅಭಿಪ್ರಾಯ ಪಡೆಯದೆ ಏಕಪಕ್ಷೀಯವಾಗಿ ಹಾಗೂ ಅಪ್ರಜಾತಾಂತ್ರಿಕವಾಗಿ ನಿರ್ಧಾರ ತೆಗೆದುಕೊಳ್ಳುವುದನ್ನು ನಿಲ್ಲಿಸಬೇಕು. ವಿದ್ಯಾರ್ಥಿ ಸಮೂಹದ ಮೇಲೆ ವಿಪರೀತ ಹೊರೆ ಹೇರುವುದನ್ನು ಬಿಡಬೇಕು. ಆಫ್‌ಲೈನ್ ತರಗತಿಗಳು ಆರಂಭವಾಗುವ ಮುನ್ನ ಪದವಿಯ ಎಲ್ಲ ವಿದ್ಯಾರ್ಥಿಗಳಿಗೂ ಉಚಿತವಾಗಿ ಕೋವಿಡ್ ಲಸಿಕೆ ನೀಡಬೇಕು’ ಎಂದು ಆಗ್ರಹಿಸಿದರು.

ರಾಜು ಗಾಣಗಿ, ವೈಭವ, ವಿನಾಯಕ, ಗೋಪಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT