ಗುರುವಾರ , ಅಕ್ಟೋಬರ್ 29, 2020
19 °C

ಬಂದ್‌ಗೆ ಎಐಡಿಎಸ್‌ಒ ಬೆಂಬಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಅಂಗೀಕರಿಸಿರುವ, ರೈತರ ಬದುಕನ್ನು ಮತ್ತಷ್ಟು ದುರ್ಬರಗೊಳಿಸುವ ಎಪಿಎಂಸಿ ಕಾಯ್ದೆ ತಿದ್ದುಪಡಿ, ಅಗತ್ಯ ವಸ್ತುಗಳ ಕಾಯ್ದೆ ತಿದ್ದುಪಡಿ ಮೊದಲಾದವುಗಳನ್ನು ವಿರೋಧಿಸಿ ಅಖಿಲ ಭಾರತ ಸಂಘರ್ಷ ಸಮನ್ವಯ ಸಮಿತಿ ಕರೆ ನೀಡಿರುವ ಸೆ.28ರ ‘ಕರ್ನಾಟಕ ಬಂದ್‌’ಗೆ ಸಂಪೂರ್ಣ ಬೆಂಬಲ ನೀಡಲಾಗುವುದು’ ಎಂದು ಎಐಡಿಎಸ್‌ಒ ತಿಳಿಸಿದೆ.

‘ಕೋವಿಡ್–19 ಸಂಕಷ್ಟದಲ್ಲಿರುವ ರೈತರಿಗೆ ಈ ಕಾಯ್ದೆಗಳಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ. ಪ್ರಜಾತಾಂತ್ರಿಕ ಚರ್ಚೆಗಳಿಗೆ ಕಿಂಚಿತ್ತೂ ಬೆಲೆ ನೀಡದೆ, ಕೋವಿಡ್ ಸಂದರ್ಭ ಬಳಸಿಕೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತರಾತುರಿಯಲ್ಲಿ ಅಂಗೀಕರಿಸುತ್ತಿರುವ ಕುತಂತ್ರವು ಬಯಲಾಗಿದೆ. ಇದರಿಂದ, ಕೃಷಿ ಉತ್ಪಾದನೆ ಮತ್ತು ಮಾರುಕಟ್ಟೆ ಕ್ಷೇತ್ರಗಳಲ್ಲಿ ಕಾರ್ಪೊರೇಟ್‌ ಕಂಪನಿಗಳು ಲಗ್ಗೆ ಇಟ್ಟು ಸಣ್ಣ ಮತ್ತು ಮಧ್ಯಮ ವರ್ಗದ ರೈತರು ನಾಶವಾಗುತ್ತಾರೆ. ಮಧ್ಯಮ ವರ್ಗದ ವ್ಯಾಪಾರಿಗಳು ಕೂಡ ದಿವಾಳಿಯಾಗುತ್ತಾರೆ. ಇದನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟವನ್ನು ಎಲ್ಲರೂ ಬೆಂಬಲಿಸಬೇಕು’ ಎಂದು ಜಿಲ್ಲಾ ಸಂಘಟಕ ಮಹಾಂತೇಶ ಬಿಳೂರ ಕೋರಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.