ಬೆಳಗಾವಿ: ‘ಸಂಕಷ್ಟದಲ್ಲಿ ಇರುವಂಥ ಮಕ್ಕಳು ಮತ್ತು ಮಹಿಳೆಯರಿಗೆ ನೆರವಾಗಲು ‘ಅಕ್ಕಾ ಪಡೆ’ಗಳನ್ನು ಸ್ಥಾಪಿಸುತ್ತಿದ್ದೇವೆ. ಬೆಂಗಳೂರಿನಲ್ಲಿ ನ.19ರಂದು ಚಾಲನೆ ನೀಡಲಾಗುವುದು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ‘ಮೈಸೂರು, ಉಡುಪಿ ಮತ್ತು ಬೆಳಗಾವಿಯಲ್ಲಿ ಅಕ್ಕಾ ಪಡೆಗಳು ಪ್ರಾಯೋಗಿಕವಾಗಿ ಜಾರಿಗೆ ಬರಲಿವೆ. 10 ರಿಂದ 15 ಜನರ ತಂಡ ಇರಲಿದ್ದು, ಎನ್ಸಿಸಿ ಹಿರಿಯ ಕೆಡೆಟ್ಗಳು ಮತ್ತು ಮಹಿಳಾ ಪೊಲೀಸ್ ಸಿಬ್ಬಂದಿ ಒಳಗೊಂಡಿರಲಿವೆ’ ಎಂದರು.

‘ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅಧಿಕಾರವಧಿಯಲ್ಲಿ ಅಂಗನವಾಡಿ ಕೇಂದ್ರಗಳು ಆರಂಭವಾಗಿದ್ದವು. ನವೆಂಬರ್ 19ರಂದು ಇಂದಿರಾ ಗಾಂಧಿ ಅವರ ಜನ್ಮದಿನವಿದೆ. ಬೆಂಗಳೂರಿನಲ್ಲಿ ಅಂದೇ ಅಂಗನವಾಡಿ ಕೇಂದ್ರಗಳ ಸುವರ್ಣ ಮಹೋತ್ಸವ ಕಾರ್ಯಕ್ರಮ ಆಯೋಜಿಸುತ್ತಿದ್ದೇವೆ’ ಎಂದರು.

‘ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದಲ್ಲಿ 21 ಕಂತಿನ ಹಣವನ್ನು ಈವರೆಗೆ ಬಿಡುಗಡೆ ಮಾಡಲಾಗಿದ್ದು, ಬಾಕಿ ಹಣ ಶೀಘ್ರ ಬಿಡುಗಡೆ ಮಾಡಲಾಗುವುದು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.