ಯರಗಟ್ಟಿ: ‘ಶರಣೆ ಅಕ್ಕಮಹಾದೇವಿ ವಚನಗಳು ಮಹಿಳೆಯರಿಗೆ ದಾರಿ ದೀಪವಾಗಿದ್ದು, ಅವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಕಟಕೋಳ ಪಟ್ಟಣದ ವಿರಕ್ತಮಠದ ಮಠದ ಸಚ್ಚಿದಾನಂದ ಸ್ವಾಮೀಜಿ ಹೇಳಿದರು.

ಪಟ್ಟಣದ ಅಕ್ಕನ ಬಳಗದಿಂದ ಹಮಿಕೊಂಡಿದ್ದ ಅಕ್ಕಮಹಾದೇವಿ ಜಯಂತ್ಯುತ್ಸವ, ತೊಟ್ಟಿಲೋತ್ಸವ ಹಾಗೂ ಉಡಿ ತುಂಬುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸವದತ್ತಿಯ ಬಿಜೆಪಿ ಮುಖಂಡ ಮಡಿವಾಳಪ್ಪ ಬಿದರಗಡ್ಡಿ ಮಾತನಾಡಿ, ‘ವಿಶ್ವಗುರು ಬಸವೇಶ್ವರರು 12ನೇ, ಶತಮಾನದಲ್ಲಿ ಸಮ ಸಮಾಜದ ನಿರ್ಮಾಣಕ್ಕೆ ತಮ್ಮ ವಚನಗಳ ಮೂಲಕ ಸಾಕಷ್ಟು ಪ್ರಯತ್ನ ಪಟ್ಟಿದ್ದಾರೆ. ಅವರ ಆದರ್ಶಗಳು ಹಾಗೂ ಮಹಿಳಾ ಕುಲಕ್ಕೆ ಸಂದೇಶ ಸಾರಿದ ಅಕ್ಕಮಹಾದೇವಿ ಸಾಮಾಜಿಕ ತತ್ವಗಳು ಸಮಾಜಕ್ಕೆ ದಾರಿದೀಪ ಎಂದು ತಿಳಿಸಿದರು.

ಭಾಗ್ಯಜ್ಯೋತಿ ಬಿದರಗಡ್ಡಿ, ಎಂ.ಬಿ.ವಾಲಿ, ಮೈತೇಂಬಣಿ ಗದಗಪ್ಪಗೌಡ, ಸಮಾಜಸೇವಕ ಶಿವಾನಂದ ಪಟ್ಟಣಶೆಟ್ಟಿ, ಶ್ವೇತಾ ಪಟ್ಟಣಶೆಟ್ಟಿ, ಪೂರ್ಣಿಮಾ ಕತ್ತಿಶೆಟ್ಟಿ, ಸದಾನಂದ ಹಣಬರ, ಕುಮಾರ ಹಿರೇಮಠ, ಅಕ್ಕನ ಬಳಗದ ಸದಸ್ಯರು ಇದ್ದರು. ಇದೇ ಸಂದರ್ಭದಲ್ಲಿ ಮಹಿಳಾ ಸಾಧಕರನ್ನು ಸನ್ಮಾಸಿಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-21-2072245939

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.