ಭಾನುವಾರ, ಸೆಪ್ಟೆಂಬರ್ 19, 2021
24 °C

ಯಡಿಯೂರಪ್ಪಗೆ ವೀರಶೈವ ಮಹಾಸಭಾ ಬೆಂಬಲ: ರತ್ನಪ್ರಭಾ ಬೆಲ್ಲದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಉತ್ತಮ ಆಡಳಿತ ನೀಡುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಎಲ್ಲ ಸಮುದಾಯದವರನ್ನೂ ಸಮಾನವಾಗಿ ಕಂಡಿದ್ದಾರೆ. ಹಲವು ಸಂದರ್ಭದಲ್ಲಿ ರಾಜ್ಯವನ್ನು ಸಂಕಟದಿಂದ ಪಾರು ಮಾಡಿದ್ದಾರೆ. ಅವರಿಗೆ ಅಖಿಲ ಭಾರತ ವೀರಶೈವ ಮಹಾಸಭೆ ಜಿಲ್ಲಾ ಘಟಕ ಸಂಪೂರ್ಣವಾಗಿ ಬೆಂಬಲ ನೀಡುತ್ತದೆ’ ಎಂದು ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ಹೇಳಿದ್ದಾರೆ.

‘ಅವರು ವೀರಶೈವ-ಲಿಂಗಾಯತ ಸಮಾಜದ ನಾಯಕರು ಮಾತ್ರವಲ್ಲ; ಎಲ್ಲ ಸಮುದಾಯಗಳನ್ನು ಅತ್ಯಂತ ಸೌಹಾರ್ದದಿಂದ ಕಂಡಿದ್ದಾರೆ. ಬಿಜೆಪಿ ಪಕ್ಷವನ್ನು ಸಂಘಟಿಸಿದ್ದಾರೆ. ಹಲವಾರು ಅಭಿವೃದ್ಧಿ ಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ತಂದಿದ್ದಾರೆ. ಅವರು ಪೂರ್ಣಾವಧಿಗೆ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಳ್ಳಬೇಕು. ಮಹಾಸಭಾ ಅವರ ಬೆನ್ನಿಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು