ಎಂ.ಕೆ.ಹುಬ್ಬಳ್ಳಿ: ಇಲ್ಲಿನ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಆಗ್ರಹಿಸಿ ಕಾರ್ಖಾನೆ ಆವರಣದಲ್ಲಿ ರೈತ ಸಂಘಗಳ ಒಕ್ಕೂಟ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಶನಿವಾರ ಮುಂದುವರಿಯಿತು.
ಅವ್ಯವಹಾರದ ಕುರಿತು ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳಲು ಸೆ.25ರಂದು ನಡೆಯಲಿರುವ ಕಾರ್ಖಾನೆ ವಾರ್ಷಿಕ ಮಹಾಸಭೆಯಲ್ಲಿ ಠರಾವು ಪಾಸ ಮಾಡಬೇಕೆಂದು ಆಗ್ರಹಿಸಿದರು.
ತನಿಖೆ ನಡೆಸಲು ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿ, ರೈತರು, ಲೆಕ್ಕ ಪರಿಶೋಧಕರು, ಪೊಲೀಸರು, ಕಾರ್ಖಾನೆಯ ನಿರ್ದೇಶಕರು, ನಿವೃತ್ತ ಸೈನ್ಯಾಧಿಕಾರಿ ಸೇರಿ ಉನ್ನತ ಅಧಿಕಾರಿಗಳ ಒಳಗೊಂಡ ಸಮಿತಿ ರಚಿಸಿ, ಕಾನುನಾತ್ಮಕ ತನಿಖೆ ನಡೆಸಲು ಒಪ್ಪಿಗೆಯ ಠರಾವು ಪಾಸ್ ಮಾಡಬೇಕೆಂದು ರೈತರು ಆಗ್ರಹಿಸಿದ್ದಾರೆ. ತನಿಖೆಗೆ ಒಪ್ಪಿಗೆ ಸಿಗುವ ತನಕ ಧರಣಿ ಸತ್ಯಾಗ್ರಹ ಮುಂದುವರೆಸುವುದಾಗಿ ಘೋಷಿಸಿದ್ದಾರೆ.