ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 130ನೇ ಜನ್ಮ ದಿನವನ್ನು ಸರಳವಾಗಿ ಬುಧವಾರ ಆಚರಿಸಲಾಯಿತು.

ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಸರಳ ರೀತಿಯಲ್ಲಿ ಆಚರಿಸಲಾಯಿತು. ಶಾಸಕರಾದ ಅನಿಲ್ ಬೆನಕೆ ಮತ್ತು ಅಭಯ ಪಾಟೀಲ ಮಾಲಾರ್ಪಣೆ ಮಾಡಿದರು.

ನಗರ ಪೊಲೀಸ್ ಆಯುಕ್ ಕೆ. ತ್ಯಾಗರಾಜನ್, ಜಿಲ್ಲಾ ಪಂಚಾಯ್ತಿ ಸಿಇಒ ಎಚ್.ವಿ. ದರ್ಶನ್, ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ್, ಮಹಾನಗರ ಪಾಲಿಕೆಯ ಆಯುಕ್ತರಾದ ಕೆ.ಎಚ್. ಜಗದೀಶ್, ಮುಖಂಡ ಮಲ್ಲೇಶಿ ಚೌಗಲೆ ಉಪಸ್ಥಿತರಿದ್ದರು.

ಇದಕ್ಕೂ ಮುಂಚೆ ಸದಾಶಿವ ನಗರದಲ್ಲಿರುವ ಬುದ್ಧ ವಿಹಾರದಲ್ಲಿ ಬುದ್ಧನ ಪ್ರತಿಮೆಗೆ ಜಿಲ್ಲಾಧಿಕಾರಿ ಪುಷ್ಪ ಸಮರ್ಪಿಸಿದರು.

ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ, ಸಂಸದೆ ಶೋಭಾ ಕರಂದ್ಲಾಜೆ, ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.