ಭಾನುವಾರ, ಆಗಸ್ಟ್ 25, 2019
27 °C

ಅತ್ಯಾಧುನಿಕ ಆಂಬುಲೆನ್ಸ್‌ ಸೇವೆಗೆ ಚಾಲನೆ

Published:
Updated:
Prajavani

ಬೆಳಗಾವಿ: ಸ್ಮಾರ್ಟ್‌ ಸಿಟಿ ಯೋಜನೆಯಡಿ ಇಲ್ಲಿನ ಜಿಲ್ಲಾಸ್ಪತ್ರೆಗೆ ಒದಗಿಸಿರುವ ಅತ್ಯಾಧುನಿಕ ಸೌಲಭ್ಯಗಳುಳ್ಳ ಆಂಬುಲೆನ್ಸ್‌ ಸೇವೆಗೆ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಶನಿವಾರ ಚಾಲನೆ ನೀಡಿದರು.

ಇದೇ ವೇಳೆ ಆಸ್ಪತ್ರೆಗೆ ವೈದ್ಯಕೀಯ ಉಪಕರಣಗಳು, ಮಾಡ್ಯುಲರ್‌ ಆಪರೇಷನ್‌ ಥಿಯೇಟರ್‌, ಐಸಿಯು ನಿರ್ಮಾಣಕ್ಕೆ ಮಂಜೂರಾತಿ ನೀಡಲಾಯಿತು. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು.

ಶಾಸಕರಾದ ಅನಿಲ ಬೆನಕೆ, ಅಭಯ ಪಾಟೀಲ, ಬಿಜೆಪಿ ರಾಜ್ಯ ಘಟಕದ ವಕ್ತಾರ ಎಂ.ಬಿ. ಝಿರಲಿ, ನಗರ ಘಟಕದ ಅಧ್ಯಕ್ಷ ರಾಜೇಂದ್ರ ಹರಕುಣಿ, ಬಿಮ್ಸ್‌ ನಿರ್ದೇಶಕ ಡಾ.ಎಸ್‌.ಟಿ. ಕಳಸದ ಇದ್ದರು.

Post Comments (+)