ಮಂಗಳವಾರ, ಜೂನ್ 28, 2022
22 °C

ಪ್ರಭಾಕರ ಕೋರೆಗೆ ಅಮೆರಿಕ ವಿ.ವಿ. ಗೌರವ ಡಾಕ್ಟರೇಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಇಲ್ಲಿನ ಕೆಎಲ್‌ಇ ಸೊಸೈಟಿ ಕಾರ್ಯಾಧ್ಯಕ್ಷ ಮತ್ತು ಕೆಎಲ್ಇ ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿಯ ಕುಲಾಧಿಪತಿ ಪ್ರಭಾಕರ ಕೋರೆ ಅವರಿಗೆ ಅಮೆರಿಕದ ಫಿಲಾಡೆಲ್ಫಿಯಾದ ಥಾಮಸ್ ಜೆಫರ್‌ಸನ್‌ ವಿಶ್ವವಿದ್ಯಾಲಯದಿಂದ ‘ಡಾಕ್ಟರ್ ಆಫ್‌ ಸೈನ್ಸ್‌’ ಗೌರವ ಡಾಕ್ಟರೇಟ್‌ ಪದವಿ ಪ್ರದಾನ ಮಾಡಲಾಗಿದೆ.

ಅವರು ಶಿಕ್ಷಣ ಮತ್ತು ಆರೋಗ್ಯ ಸೇವಾ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಪರಿಗಣಿಸಿ ಬುಧವಾರ ಅಲ್ಲಿ ನಡೆದ ಘಟಿಕೋತ್ಸವದಲ್ಲಿ ಗೌರವಿಸಲಾಗಿದೆ.

‘ಥಾಮಸ್ ಜೆಫರ್‌ಸನ್ ವಿಶ್ವವಿದ್ಯಾಲಯದ ಅಧ್ಯಕ್ಷ ಹಾಗೂ ಸಿಇಒ ಎಚ್. ರಿಚರ್ಡ್ ಹ್ಯಾವರ್‌ಸ್ಟಿಕ್, ವಿಶ್ವವಿದ್ಯಾಲಯದ ಶೈಕ್ಷಣಿಕ ವ್ಯವಹಾರಗಳ ಮುಖ್ಯಸ್ಥ ಹಾಗೂ ಕಾರ್ಯನಿರ್ವಾಹಕ ಉಪಾಧ್ಯಕ್ಷ ಡಾ.ಮಾರ್ಕ್ ಎಲ್. ಟೈಕೋಸಿನಸ್ಕಿ ಪ್ರದಾನ ಮಾಡಿದ್ದಾರೆ. ಅಮೆರಿಕದ ಅತ್ಯಂತ ಹಳೆಯ ಮತ್ತು ಪ್ರತಿಷ್ಠಿತ ಖಾಸಗಿ ವಿಶ್ವವಿದ್ಯಾಲಯದಿಂದ ಈ ಪದವಿ ಪಡೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆ ಕೋರೆ ಅವರದಾಗಿದೆ’ ಎಂದು ಕೆಎಲ್‌ಇ ಸಂಸ್ಥೆಯ ‍ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು