ಬೆಳಗಾವಿ: ಇಲ್ಲಿನ ಕರ್ನಾಟಕ ಲಿಂಗಾಯತ ಶಿಕ್ಷಣ (ಕೆಎಲ್ಇ) ಸಂಸ್ಥೆಯ ನೂತನ ಕಾರ್ಯಾಧ್ಯಕ್ಷರಾಗಿ ಅಮಿತ ಪ್ರಭಾಕರ ಕೋರೆ ಶುಕ್ರವಾರ ಆಯ್ಕೆಯಾಗಿದ್ದಾರೆ. ಅಲ್ಲದೇ, 42 ವರ್ಷಗಳ ಕಾಲ ಕಾರ್ಯಾ ಧ್ಯಕ್ಷರಾಗಿದ್ದ ಪ್ರಭಾಕರ ಕೋರೆ ಅವರನ್ನು ಗೌರವಾನ್ವಿತ ಕಾರ್ಯಾಧ್ಯಕ್ಷರಾಗಿ ನೇಮಿಸಲಾಗಿದೆ.

ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಜರುಗಿದ ನೂತನ ಆಡಳಿತ ಮಂಡಳಿಯ ಸಭೆಯಲ್ಲಿ ಅಮಿತ ಅವರಿಗೆ ಸಂಸ್ಥೆಯ ಸಾರಥ್ಯ ನೀಡಲಾಯಿತು. ಪ್ರಭಾಕರ ಅವರ ಪುತ್ರ, 46ರ ಹರೆಯದ ಅಮಿತ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾಗಿ 2010ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಶಿಕ್ಷಣ, ಸಹಕಾರ ಹಾಗೂ ಕೈಗಾರಿಕಾ ವಲಯದಲ್ಲಿ ಅನುಭವ ಹೊಂದಿದ್ದಾರೆ.

ಚಿದಾನಂದ ಬಸಪ್ರಭು ಕೋರೆ ಸಕ್ಕರೆ ಕಾರ್ಖಾನೆ ನಿರ್ದೇಶಕರಾಗಿ, ನವದೆಹಲಿಯ ನ್ಯಾಷನಲ್ ಫೆಡರೇಶನ್ ಆಫ್ ಕೋ-ಆಪರೇಟಿವ್ ಶುಗರ್ ಫ್ಯಾಕ್ಟರಿಸ್ನ ಉಪಾಧ್ಯಕ್ಷರಾಗಿ, ಶಿವಶಕ್ತಿ ಸಕ್ಕರೆ ಕಾರ್ಖಾನೆ ನಿರ್ದೇಶಕರಾಗಿ, ಹರ್ಮ್ಸ್ ಡಿಸ್ಟಿಲ್ಲರಿ ಪ್ರೈ.ಲಿ.ನ ವ್ಯವಸ್ಥಾಪಕ ನಿರ್ದೇಶಕರಾಗಿ, ಇನಾಂದಾರ ಶುಗರ್ಸ್ನ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

1916ರಲ್ಲಿ ಸ್ಥಾಪನೆಗೊಂಡ ಕೆಎಲ್ಇ ಸಂಸ್ಥೆ ದೇಶದ ಪ್ರಮುಖ ಶಿಕ್ಷಣ ಮತ್ತು ಆರೋಗ್ಯ ಸೇವಾ ಸಂಸ್ಥೆಯಲ್ಲಿ ಮಹತ್ವದ ಸ್ಥಾನ ಪಡೆದಿದೆ. ಶಾಲೆಗಳು, ಕಾಲೇಜುಗಳು, ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಸಂಸ್ಥೆಗಳು, ಆಸ್ಪತ್ರೆಗಳು ಸೇರಿ 317ಕ್ಕೂ ಹೆಚ್ಚು ಅಂಗಸಂಸ್ಥೆಗಳನ್ನು ಹೊಂದಿದೆ.

ಇತರ ಪದಾಧಿಕಾರಿಗಳು: ಮಹಾಂತೇಶ ಶಿವಾನಂದ ಕೌಜಲಗಿ (ಅಧ್ಯಕ್ಷ), ಬಸವರಾಜ ಶಿವಲಿಂಗಪ್ಪ ತಟವಟಿ (ಉಪಾಧ್ಯಕ್ಷ), ಪ್ರವೀಣ ಅಶೋಕ ಬಾಗೇವಾಡಿ, ಡಾ.ಪ್ರೀತಿ ಕರಣ್ ದೊಡವಾಡ, ಮಹಾಂತೇಶ ಮಲ್ಲಿಕಾರ್ಜುನ ಕವಟಗಿಮಠ, ಮಲ್ಲಿಕಾರ್ಜುನ ಚನಬಸಪ್ಪ ಕೊಳ್ಳಿ, ವಿಜಯ ಶ್ರೀಶೈಲಪ್ಪ ಮೆಟಗುಡ್, ಮಂಜುನಾಥ ಶಂಕರಪ್ಪ ಮುನವಳ್ಳಿ, ಜಯಾನಂದ ಉರೂಫ್ ರಾಜು ಮಹಾದೇವಪ್ಪ ಮುನವಳ್ಳಿ, ಬಸವರಾಜ ರುದ್ರಗೌಡ ಪಾಟೀಲ, ಡಾ.ವಿಶ್ವನಾಥ ಈರನಗೌಡ ಪಾಟೀಲ, ಯಲ್ಲನಗೌಡ ಶಿವಮೊಗ್ಗೆಪ್ಪ ಪಾಟೀಲ, ಅನಿಲ ವಿಜಯಬಸಪ್ಪ ಪಟ್ಟೇದ (ಆಡಳಿತ ಮಂಡಳಿಯ ಸದಸ್ಯರು)

ಸಭೆಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಡಾ.ಬಿ.ಜಿ.ದೇಸಾಯಿ, ಜಂಟಿ ಕಾರ್ಯದರ್ಶಿ ಡಾ.ಎಸ್.ಎಸ್.ಜಲಾಲಪುರೆ, ಡಾ.ಪಿ.ಆರ್.ಕಡಕೋಳ ಹಾಗೂ ಅಧಿಕಾರಿ ವರ್ಗದವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.