ಬೆಳಗಾವಿ: ‘ಸಚಿವ ಸ್ಥಾನ ಸಿಗದಿದ್ದರೆ ವಿಧಾನಸಭೆ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ನೀಡಿರುವ ಹೇಳಿಕೆಗೆ ಈಗಲೂ ಬದ್ಧನಿದ್ದೇನೆ’ ಎಂದು ಸವದತ್ತಿ–ಯಲ್ಲಮ್ಮ ಕ್ಷೇತ್ರದ ಬಿಜೆಪಿ ಶಾಸಕ ಆನಂದ ಮಾಮನಿ ತಿಳಿಸಿದರು.

‘ಪ್ರಜಾವಾಣಿ’ ಜೊತೆ ಬುಧವಾರ ಮಾತನಾಡಿದ ಅವರು, ‘2008ರಿಂದ ಸತತವಾಗಿ ಮೂರು ಬಾರಿ ಗೆದ್ದು ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಜನರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ತಲುಪಿಸಲು ಶ್ರಮಿಸಿದ್ದೇನೆ. ಪಕ್ಷಕ್ಕಾಗಿ ದುಡಿದಿದ್ದೇನೆ. ಈ ಬಾರಿ ಸಚಿವ ಸ್ಥಾನ ನೀಡಬೇಕು ಎನ್ನುವುದು ನನ್ನ ಒತ್ತಾಯವಾಗಿತ್ತು. ಕ್ಷೇತ್ರದ ಜನರ ಬಯಕೆಯೂ ಅದೇ ಆಗಿತ್ತು. ಆದರೆ, ಮನ್ನಣೆ ದೊರೆತಿಲ್ಲದಿರುವುದು ಬೇಸರ ತರಿಸಿದೆ’ ಎಂದು ತಿಳಿಸಿದರು. ‘ಪಕ್ಷದ ಹಿರಿಯ ಮುಖಂಡರೊಂದಿಗೆ ಚರ್ಚಿಸಿ, ಬಳಿಕ ಕ್ಷೇತ್ರದ ಮತದಾರರು, ಕಾರ್ಯಕರ್ತರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ’ ಎಂದು ಸ್ಪಷ್ಟಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.