ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪುಟ ರಚನೆ: ಮಾಮನಿಗೆ ಸಚಿವ ಸ್ಥಾನ ನೀಡುವಂತೆ ಸ್ವಾಮೀಜಿ ಒತ್ತಾಯ

Last Updated 3 ಆಗಸ್ಟ್ 2021, 14:10 IST
ಅಕ್ಷರ ಗಾತ್ರ

ಉಗರಗೋಳ (ಸವದತ್ತಿ ತಾ.): ‘ಸವದತ್ತಿ–ಯಲ್ಲಮ್ಮ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಕೈಗೊಂಡು, ರೈತರು, ಬಡವರು, ಮಧ್ಯಮ ವರ್ಗ ಮತ್ತು ಎಲ್ಲ ವರ್ಗಗಳ ಜನರ ಸಂಕಷ್ಟಕ್ಕೆ ಸ್ಪಂದಿಸಿರುವ ಶಾಸಕ ಆನಂದ ಮಾಮನಿ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಉಗರಗೋಳ ಶ್ರೀಗುರು ನಿರ್ವಾಣೇಶ್ವರ ಮಠದ ಪೀಠಾಧಿಪತಿ ಗುರುಮಹಾಂತ ದೇವರು ಒತ್ತಾಯಿಸಿದ್ದಾರೆ.

ಇಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಸತತ 3ನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಅವರು ನಾಡಿನ ಗುಡಿ–ಗುಂಡಾರ, ಮಠ-ಮಾನ್ಯಗಳ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಕ್ಷೇತ್ರವನ್ನು ರಾಜ್ಯದಲ್ಲೇ ಮಾದರಿಯಾಗಿ ಅಭಿವೃದ್ಧಿಪಡಿಸುವ ಕನಸಿನೊಂದಿಗೆ ಮುನ್ನಡೆಯುತ್ತಿದ್ದಾರೆ. ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿದರೆ ಅದನ್ನು ಸಮರ್ಥವಾಗಿ ನಿಭಾಯಿಸುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ದೇಶದ ನಾನಾ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆಗಿರುವ ಮಾಮನಿ, ಭಕ್ತರಿಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಶ್ರಮಿಸುತ್ತಿದ್ದಾರೆ. ಸಚಿವ ಸ್ಥಾನ ಸಿಕ್ಕರೆ ಗುಡ್ಡದಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸಗಳಿಗೆ ವೇಗ ಸಿಗಲಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT