ಈ ಬಗ್ಗೆ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘2008ರಿಂದ ಸತತವಾಗಿ ಮೂರು ಬಾರಿ ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿಗೆ ಹಗಲಿರುಳೂ ಶ್ರಮಿಸುತ್ತಿದ್ದೇನೆ. ಜನರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ತಲುಪಿಸಲು ಶ್ರಮಿಸಿದ್ದೇನೆ. ಪಕ್ಷಕ್ಕಾಗಿ ದುಡಿದಿದ್ದೇನೆ. ಈ ಬಾರಿ ಸಚಿವ ಸ್ಥಾನ ನೀಡಬೇಕು. ಒಂದು ವೇಳೆ ಕೊಡದಿದ್ದರೆ ವಿಧಾನಸಭೆ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ’ ಎಂದು ತಿಳಿಸಿದ್ದಾರೆ.