ಬೆಳಗಾವಿ: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಭದ್ರತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ ತಾಲ್ಲೂಕು ಸಮಿತಿಯವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

‘ಲಾಕ್‌ಡೌನ್ ಸಂದರ್ಭದಲ್ಲಿ ರಾಜ್ಯದ ವಿವಿಧೆಡೆ ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆದಿವೆ. ಮುಂದೆ ಹೀಗಾಗದಂತೆ ನೋಡಿಕೊಳ್ಳಬೇಕು. ಕೋವಿಡ್–19 ನಿಯಂತ್ರಣದ ಕೆಲಸದಲ್ಲಿ ತೊಡಗಿರುವ ಅಂಗನವಾಡಿ ನೌಕರರೆಲ್ಲರಿಗೂ ತಾರತಮ್ಯವಿಲ್ಲದೆ ₹ 50 ಲಕ್ಷ ವಿಮಾ ಸೌಲಭ್ಯ ಒದಗಿಸಬೇಕು. ಈಗಾಗಲೇ ನಿವೃತ್ತರಾಗಿರುವವರಿಗೆ ನಿವೃತ್ತಿ ವೇತನ ಮೊದಲಾದ ಸೌಲಭ್ಯಗಳನ್ನು ಕೂಡಲೇ ಕೊಡಿಸಬೇಕು’ ಎಂದು ಒತ್ತಾಯಿಸಿದರು.

ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.