ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತ, ಕಾರ್ಮಿಕ ವಿರೋಧಿ ಕಾಯ್ದೆ ವಾಪಸ್‌ಗೆ ಆಗ್ರಹ

Last Updated 8 ಜನವರಿ 2021, 13:32 IST
ಅಕ್ಷರ ಗಾತ್ರ

ಬೆಳಗಾವಿ: ಎಲ್ಲ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಜಿಲ್ಲಾ ಘಟಕದ ನೇತೃತ್ವದಲ್ಲಿ ಅಂಗನವಾಡಿ ನೌಕರರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಕೃಷಿಗೆ ಸಂಬಂಧಿಸಿದಂತೆ ತಿದ್ದುಪಡಿ ಮಾಡಿರುವ ಮೂರು ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ವಿದ್ಯುತ್ ಮಸೂದೆ–2020 ಹಿಂಪಡೆಯಬೇಕು. ಎಲ್ಲ ರೀತಿಯ ಖಾಸಗೀಕರಣವನ್ನು ಕೂಡಲೇ ನಿಲ್ಲಿಸಬೇಕು. ಬಡ ಕುಟುಂಬದ ಪ್ರತಿಯೊಬ್ಬರಿಗೂ ಪ್ರತಿ ತಿಂಗಳು ತಲಾ 10 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ಕೊಡಬೇಕು. ಉದ್ಯೋಗ ಖಾತ್ರಿ ಯೋಜನೆಯಲ್ಲಿ ವಾರ್ಷಿಕ 200 ದಿನಗಳು ಉದ್ಯೋಗ ಕೊಡಬೇಕು. ದಿನಕ್ಕೆ ₹ 200 ಕೂಲಿ ಕೊಡಬೇಕು. ನಗರ ಪ್ರದೇಶದವರಿಗೂ ಈ ಯೋಜನೆ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.

‘ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಗೊಳಿಸಬೇಕು. ಹಳೆಯ ಪಿಂಚಣಿ ಯೋಜನೆಯನ್ನು ಮುಂದುವರಿಸಬೇಕು. ಎಲ್ಲ ಅಸಂಘಟಿತ ಕಾರ್ಮಿಕರಿಗೂ ಸಾಮಾಜಿಕ ಭದ್ರತಾ ಯೋಜನೆ ಜಾರಿಗೊಳಿಸಬೇಕು. ಉಚಿತ ಸಾರ್ವತ್ರಿಕ ಆರೋಗ್ಯ ರಕ್ಷಣೆಯನ್ನು ಎಲ್ಲರಿಗೂ ಒದಗಿಸಬೇಕು. ಐಸಿಡಿಎಸ್ ಯೋಜನೆಗೆ ಹೆಚ್ಚಿನ ಅನುದಾನ ಕೊಡಬೇಕು. ಎಲ್‌ಕೆಜಿ ಹಾಗೂ ಯುಕೆಜಿಯನ್ನು ಅಂಗನವಾಡಿ ಕೇಂದ್ರಗಳಲ್ಲೇ ನಡೆಸಬೇಕು. ₹ 21 ಸಾವಿರ ಕನಿಷ್ಠ ವೇತನ ಜಾರಿಗೊಳಿಸಬೇಕು. ಮಧ್ಯಾಹ್ನದ ಬಿಸಿಯೂಟ ಯೋಜನೆ ಖಾಸಗೀಕರಣ ಮಾಡಬಾರದು. ಆ ಯೋಜನೆಯ ನೌಕರರನ್ನು ಕಾಯಂಗೊಳಿಸಬೇಕು. ಗುತ್ತಿಗೆ ಪದ್ಧತಿ ನಿಲ್ಲಿಸಬೇಕು’ ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT