ಗೋಕಾಕ: ಪ್ರಾಮಾಣಿಕ ಸೇವೆ ಸಲ್ಲಿಸುವ ಮೂಲಕ ಮಕ್ಕಳ ಮತ್ತು ತಾಯಂದಿರ ಪ್ರೀತಿಗೆ ಪಾತ್ರರಾಗುವಂತೆ ಬೆಮುಲ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನೂತನ ನೇಮಕಾತಿ ಆದೇಶ ಪಡೆದಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಸಲಹೆ ಮಾಡಿದರು.

ಇಲ್ಲಿನ ಎನ್ಎಸ್ಎಫ್ ಅತಿಥಿಗೃಹ ಆವರಣದಲ್ಲಿ ಅರಭಾವಿ ಶಿಶು ಅಭಿವೃದ್ಧಿ ಯೋಜನೆಯಿಂದ ಜರುಗಿದ ಕಾರ್ಯಕ್ರಮದಲ್ಲಿ ಹೊಸದಾಗಿ ನೇಮಕಗೊಂಡಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಆದೇಶ ಪತ್ರಗಳನ್ನು ವಿತರಿಸಿ ಮಾತನಾಡಿದ ಅವರು, ಶಿಸ್ತು, ಸಂಯಮದಿಂದ ಕೆಲಸ ಮಾಡಿ ಮಕ್ಕಳ ಸರ್ವಾಂಗೀಣ ಪ್ರಗತಿಗಾಗಿ ಶ್ರಮಿಸುವಂತೆಯೂ ಇದೇ ಸಂದರ್ಭದಲ್ಲಿ ಕಾರ್ಯಕರ್ತೆಯರಿಗೆ ಕಿವಿಮಾತು ಹೇಳಿದರು.

ಅರಭಾವಿ ಶಿಶು ಅಭಿವೃದ್ಧಿ ಇಲಾಖೆಯಲ್ಲಿ 11 ಕಾರ್ಯಕರ್ತೆಯರು ಮತ್ತು 34 ಸಹಾಯಕಿಯರನ್ನು ಅತ್ಯಂತ ಪ್ರಾಮಾಣಿಕವಾಗಿ ಆಯ್ಕೆ ಮಾಡಲಾಗಿದೆ. ಇಲಾಖೆಯ ನಿಯಮದಂತೆ ವಿಧವೆಯರಿಗೆ ಮೊದಲ ಆದ್ಯತೆ ನೀಡಲಾಗಿದೆ. ನಿಮ್ಮಲ್ಲಿರುವ ಅರ್ಹತೆ ಮತ್ತು ಪ್ರತಿಭೆಯೇ ಈ ಆಯ್ಕೆಗೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ 6 ವರ್ಷದೊಳಗಿನ ಮಕ್ಕಳ ಬೆಳವಣಿಗೆಯಲ್ಲಿ ಕಾರ್ಯಕರ್ತೆಯರ ಪಾತ್ರ ಮಹತ್ವದ್ದಾಗಿದೆ. ಬಾಣಂತಿಯರಿಗೆ ಉತ್ತಮ ಗುಣಮಟ್ಟದ ಪೌಷ್ಟಿಕಾಂಶವನ್ನು ವಿತರಿಸಬೇಕು. ಎಲ್ಲ ಮಕ್ಕಳನ್ನು ಒಂದೇ ತೆರನಾಗಿ ನೋಡಿಕೊಳ್ಳಬೇಕು ಎಂದರು.

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಆದೇಶ ಪತ್ರಗಳನ್ನು ವಿತರಿಸಿದರು. ನಂತರ ಶಾಸಕರನ್ನು ಇಲಾಖೆಯಿಂದ ಸತ್ಕರಿಸಿ, ಗೌರವಿಸಲಾಯಿತು. ಅರಭಾವಿ ಶಿಶು ಅಭಿವೃದ್ಧಿ ಅಧಿಕಾರಿ ಯಲ್ಲಪ್ಪ ಗದಾಡಿ, ಮೇಲ್ವಿಚಾರಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.